ರಾಜಸ್ಥಾನ: ವಲಸೆ ಜಾತಿಯ ಪಕ್ಷಿಗಳು ಸೇರಿದಂತೆ ಸುಮಾರು 1,000ಕ್ಕೂ ಹೆಚ್ಚು ಪಕ್ಷಿಗಳು ಮೃತಪಟ್ಟಿರುವ ದಾರುಣ ಘಟನೆ ಜೈಪುರದ ಪ್ರಸಿದ್ಧ ಸಂಭಾರ್ ಸರೋವರದ ಬಳಿ ನಡೆದಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಕೌಶಿಕ್, ಸಂಭಾರ್ ಸರೋವರದಲ್ಲಿ ವಿವಿಧ ಪ್ರಭೇದದ ಸಾವಿರಾರು ಪಕ್ಷಿಗಳು ಭಾನುವಾರ ಸಾವನ್ನಪ್ಪಿರುವುದು ಕಂಡುಬಂದಿದೆ. ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪಕ್ಷಿಗಳ ಅನಮಾನಾಸ್ಪದ ಸಾವು ಪ್ರಕರಣಕ್ಕೆ ಪರಿಸರ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.