ETV Bharat / bharat

ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ: ಕೃತಕ ಉಸಿರಾಟ ವ್ಯವಸ್ಥೆ, ಏಮ್ಸ್‌ಗೆ ಮುಖಂಡರು ದೌಡು

ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೇಂದ್ರದ ಮಾಜಿ ವಿತ್ತ ಸಚಿವ ಅರುಣ್​ ಜೇಟ್ಲಿ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಅರುಣ್​ ಜೇಟ್ಲಿ
author img

By

Published : Aug 17, 2019, 7:32 PM IST

Updated : Aug 17, 2019, 8:02 PM IST

ನವದೆಹಲಿ: ಕಳೆದ ಕೆಲ ದಿನಗಳಿಂದ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆಗಸ್ಟ್​​ 9ರಿಂದ ಅರುಣ್ ಜೇಟ್ಲಿ ಏಮ್ಸ್​​ನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಇದೀಗ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಉಲ್ಭಣಗೊಂಡಿದೆ. ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿರುವ ಅವರಿಗೆ ಕೃತಕ ಉಸಿರಾಟದ ಸಾಧನ ಅಳವಡಿಸಲಾಗಿದೆ.

ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ: ಕೃತಕ ಉಸಿರಾಟ ವ್ಯವಸ್ಥೆ

ಈ ಬೆನ್ನಲ್ಲೇ ಏಮ್ಸ್​ ಆಸ್ಪತ್ರೆಗೆ ಗಣ್ಯಾತಿಗಣ್ಯರು ಧಾವಿಸುತ್ತಿದ್ದು, ಇಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್​ ಮಲಿಕ್​, ಬಿಹಾರದ ಮುಖ್ಯಮಂತ್ರಿ ನಿತಿಶ್​ ಕುಮಾರ್​​, ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಭೇಟಿ ನೀಡಿ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ.

ಕಳೆದ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದರು.

2019ರ ಜನವರಿಯಲ್ಲಿ ಜೇಟ್ಲಿ ಅಮೆರಿಕಗೆ ತೆರಳಿದ ಜೇಟ್ಲಿ ಎಡಗಾಲಿನ ಸಾಫ್ಟ್​ ಟಿಶ್ಯು ಕ್ಯಾನ್ಸರ್‌ ಸಂಬಂಧ ಆಪರೇಷನ್​ಗೆ ಒಳಗಾಗಿದ್ದರು. 2018ರ ಮೇ 14ರಂದು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು.

Intro:Body:

ಕೃತಕ ಉಸಿರಾಟದ ಮೇಲೆ ಅರುಣ್​ ಜೇಟ್ಲಿ... ಏಮ್ಸ್​​ನತ್ತ ಪ್ರಮಖ ಮುಖಂಡರು ದೌಡು! 

ನವದೆಹಲಿ: ಕಳೆದ ಕೆಲ ದಿನಗಳಿಂದ ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೇಂದ್ರದ ವಿತ್ತ ಸಚಿವ ಅರುಣ್​ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಏಮ್ಸ್​ ತಿಳಿಸಿದೆ. 

 ಆಗಸ್ಟ್​​ 9ರಂದು  ಬೆಳಗ್ಗೆ ಅರುಣ್ ಜೇಟ್ಲಿ ಏಮ್ಸ್​​ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಇದೀಗ ಅವರ ಆರೋಗ್ಯದಲ್ಲಿ ಮತ್ತಷ್ಟು ಸಮಸ್ಯೆಯಾಗಿರುವ ಕಾರಣ ಉಸಿರಾಟ ನಡೆಸಲು ತೊಂದರೆಯಾಗುತ್ತಿದೆ. ಹೀಗಾಗಿ ಈ ಸಾಧನ ಅಳವಡಿಸಲಾಗಿದೆ. 

ಇನ್ನು ಏಮ್ಸ್​ ಆಸ್ಪತ್ರೆಗೆ ವಿವಿಧ ಮುಖಂಡರು ಭೇಟಿ ನೀಡುತ್ತಿದ್ದು,  ಇಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್​ ಮಲಿಕ್​,ಬಿಹಾರದ ಮುಖ್ಯಮಂತ್ರಿ ನಿತಿಶ್​ ಕುಮಾರ್​​,ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಭೇಟಿ ನೀಡಿ ಅವರ ಆರೋಗ್ಯದ ಮಾಹಿತಿ ಪಡೆದುಕೊಂಡರು. 

ಇನ್ನು ನಿನ್ನೆ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದರು.

Conclusion:
Last Updated : Aug 17, 2019, 8:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.