ETV Bharat / bharat

ಮೋದಿ ಸರ್ಕಾರದ ಟ್ರಬಲ್​ ಶೂಟರ್​​ ಇನ್ನಿಲ್ಲ... ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರು - arun jetly no more

ಅನಾರೋಗ್ಯದ ಕಾರಣ 2019ರ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದ ಅರುಣ್​​ ಜೇಟ್ಲಿ, ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಸ್ಟಾರ್​ ಪ್ರಚಾರಕರಾಗಿ ಕಾಣಿಸಿಕೊಂಡಿದ್ದರು.

arun jetly no more
author img

By

Published : Aug 24, 2019, 12:42 PM IST

Updated : Aug 24, 2019, 1:08 PM IST

ನವದೆಹಲಿ: ಮಾಜಿ ಕೇಂದ್ರ ಸಚಿವ, ಮೋದಿ ಸರ್ಕಾರದ ಟ್ರಬಲ್​ ಶೂಟರ್​ ಅರುಣ್​ ಜೇಟ್ಲಿ (66) ಏಮ್ಸ್​​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳಿಂದ ತೀವ್ರ ಅನಾರೋಗ್ಯದ ಸಮಸ್ಯೆಗೆ ಒಳಗಾಗಿದ್ದ ಅವರನ್ನ ಉಸಿರಾಟದ ತೊಂದರೆ ಇದ್ದ ಕಾರಣ ಆಗಸ್ಟ್​​ 8ರ ಬೆಳಗ್ಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಅರುಣ್​ ಜೇಟ್ಲಿ ಮೂಲತಃ ವಕೀಲರಾಗಿದ್ದು, ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿ ಕೆಲಸ ಮಾಡಿದ್ದರು. ಜತೆಗೆ ಮೋದಿ ಸರ್ಕಾರದ ಟ್ರಬಲ್​ ಶೂಟರ್​ ಎಂದೇ ಕರೆಸಿಕೊಂಡಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಎನ್​ಡಿಎ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಇವರು, ನೋಟ್​ ಬ್ಯಾನ್​, ಜಿಎಸ್​ಟಿಯಂತಹ ಮಹತ್ವದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಅನಾರೋಗ್ಯದಿಂದ ಸಚಿವ ಪದವಿ ತ್ಯಜಿಸಿದ್ದ ಜೇಟ್ಲಿ:

ಅನಾರೋಗ್ಯದ ಕಾರಣ 2019ರ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದ ಅರುಣ್​​ ಜೇಟ್ಲಿ, ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಸ್ಟಾರ್​ ಪ್ರಚಾರಕರಾಗಿ ಕಾಣಿಸಿಕೊಂಡಿದ್ದರು. ಇನ್ನು ಕೇಂದ್ರದಲ್ಲಿ ಮೋದಿ 2.0 ಸರ್ಕಾರ ಕೇಂದ್ರದಲ್ಲಿ ಚುಕ್ಕಾಣಿ ಹಿಡಿಯುತ್ತಿದ್ದಂತೆ ತಮಗೆ ಯಾವುದೇ ರೀತಿಯ ಜವಾಬ್ದಾರಿ ನೀಡದಂತೆ ಮೋದಿ ಬಳಿ ಮನವಿ ಮಾಡಿಕೊಂಡಿದ್ದರು.

2018 ರಿಂದಲೇ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆದಿದ್ದ ಟ್ರಬಲ್​ ಶೂಟರ್​:

2019ರ ಜನವರಿಯಲ್ಲಿ ಜೇಟ್ಲಿ ಅಮೆರಿಕಾದಲ್ಲಿ ಎಡಗಾಲಿನಲ್ಲಿ ಆಗಿದ್ದ ಸಾಫ್ಟ್​ ಟಿಶ್ಯು ಕ್ಯಾನ್ಸರ್​ ಆಪರೇಷನ್​ಗೆ ಒಳಗಾಗಿದ್ದರು. ಇದಕ್ಕೂ ಮೊದಲು 2018ರ ಮೇ 14ರಂದು ಜೇಟ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಬಾಲ್ಯ ಜೀವನ:

ಅರುಣ್ ಜೇಟ್ಲಿ ಕಿಶನ್ ಹಾಗೂ ರತನ್ ಪ್ರಭಾ ಜೇಟ್ಲಿ ದಂಪತಿಗಳ ಮಗನಾಗಿ ಡಿಸೆಂಬರ್​ 28, 1952ರಲ್ಲಿ ದೆಹಲಿಯಲ್ಲಿ ಜನಿಸುತ್ತಾರೆ. 1973ರಲ್ಲಿ ನವದೆಹಲಿಯ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್​​​ನಲ್ಲಿ ವಾಣಿಜ್ಯ ಪದವಿಯನ್ನು ಪಡೆದುಕೊಂಡರು. 1977ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಫ್ಯಾಕಲ್ಟಿ ಆಫ್ ಲಾದಿಂದ ಕಾನೂನು ಪದವಿಯನ್ನು ಪಡೆದುಕೊಂಡರು. ವಿದ್ಯಾರ್ಥಿ ಜೀವನದಲ್ಲೇ ಅನೇಕ ಸಾಧನೆ ಮಾಡಿ ಪ್ರಶಸ್ತಿಗಳಿಸಿದ್ದ ಇವರು, 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು.

ವಿದ್ಯಾರ್ಥಿ ಸಂಘದ ನಾಯಕನಾಗಿರಾಜಕೀಯ ವೃತ್ತಿ ಜೀವನ

70 ದಶಕದಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಜೇಟ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ‌ಬಿವಿಪಿ)ನ ವಿದ್ಯಾರ್ಥಿ ನಾಯಕನಾಗಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ 19 ತಿಂಗಳುಗಳ ಕಾಲ ಸೆರೆವಾಸದಲ್ಲಿದ್ದರು. 1973ರಲ್ಲಿ ರಾಜ್ ನರೇನ್ ಹಾಗೂ ಜಯ ಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಆರಂಭವಾದ ಭ್ರಷ್ಟಾಚಾರಕ್ಕೆ ವಿರುದ್ಧದ ಚಳವಳಿಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಜೈಲಿನಿಂದ ಹೊರಬಂದ ಬಳಿಕ ಜನಸಂಘ ಸೇರಿಕೊಂಡರು.

ಕಾನೂನು ವೃತ್ತಿ:

1977ರಿಂದ ದೇಶದ ಹಲವಾರು ಹೈಕೋರ್ಟ್‌ಗಳಲ್ಲಿ ಹಾಗೂ ಭಾರತದ ಸುಪ್ರೀಂಕೋರ್ಟ್​​ನಲ್ಲಿ ವಕೀಲ ವೃತ್ತಿ. 1989ರ ವಿ.ಪಿ. ಸಿಂಗ್ ಸರ್ಕಾರದಲ್ಲಿ ಅಡಿಷನಲ್ ಸಾಲಿಸಿಟರ್ ಜನರಲ್ ಆಗಿ ನೇಮಕ. ಜೂನ್ 1998ರಲ್ಲಿ ಡ್ರಗ್ಸ್ ಹಾಗೂ ಮನಿ ಲಾಂಡರಿಂಗ್ ಹಗರಣಗಳಿಗೆ ಸಂಬಂಧಿಸಿದಂತೆ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಸಭೆಯಲ್ಲಿ ಇವರು ಭಾರತ ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಿ ಗಮನ ಸೆಳೆದಿದ್ದರು.

ವೈಯಕ್ತಿಕ ಜೀವನ:

ಜೇಟ್ಲಿ 24 ಮೇ 1982ರಂದು ಸಂಗೀತಾ ಜೇಟ್ಲಿಯವರನ್ನು ವಿವಾಹವಾದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ರಾಜಕೀಯ ಜೀವನ:

ಅರುಣ್ ಜೇಟ್ಲಿ ತಮ್ಮ ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ವಿದ್ಯಾರ್ಥಿ ವಿಭಾಗವಾದ ಸಕ್ರೀಯ ಸದಸ್ಯರು. 1999ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪಕ್ಷದ ವಕ್ತಾರರಾಗಿ ಕೆಲಸ ಮಾಡಿದ್ದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಡಿಯಲ್ಲಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದಾಗ, 1999 ಅಕ್ಟೋಬರ್ 13 ರಲ್ಲಿ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಮಂತ್ರಿಯಾಗಿ (ಸ್ವತಂತ್ರ ಹೊಣೆಗಾರಿಕೆ)ನೇಮಕಗೊಂಡರು. ಇದಾದ ಬಳಿಕ ಹಣಕಾಸು ಖಾತೆ, ಕಾನೂನು ನ್ಯಾಯಾಂಗ,ವಾಣಿಜ್ಯ & ಕೈಗಾರಿಕೆ ಹಾಗೂ ಕಾನೂನು & ನ್ಯಾಯಾಂಗ ಖಾತೆ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.

ಕರ್ನಾಟದಲ್ಲಿ ಮಹತ್ವದ ಪಾತ್ರ

ಮೇ 2004ರ ಲೋಕಸಭಾ ಚುನಾವಣೆಯಲ್ಲಿ ಅರುಣ್ ಜೇಟ್ಲಿಯವರಿಗೆ ಕರ್ನಾಟಕದ ವಿಶೇಷ ಹೊಣೆ ನೀಡಲಾಗಿತ್ತು. ದಕ್ಷಿಣ ಭಾಗದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲುವಲ್ಲಿ ಇವರ ಪಾತ್ರ ಮಹತ್ವದಾಗಿದೆ. 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿತ್ತು.

Intro:Body:Conclusion:
Last Updated : Aug 24, 2019, 1:08 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.