ಗುವಾಹತಿ(ಅಸ್ಸೋಂ): ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಬಿ ವಿರುದ್ಧದ ಪ್ರತಿಭಟನೆ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹಾರಿಸಿದ್ದ ಗುಂಡು ತಗುಲಿ ಗಾಯಗೊಂಡಿದ್ದ ಇಬ್ಬರು ಪ್ರತಿಭಟನಾಕಾರರು ಇಂದು ಮೃತಪಟ್ಟಿದ್ದಾರೆ.
ಇದರಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಮಧ್ಯೆ ಸಿಎಬಿ ವಿರುದ್ಧ ಪರಿಸ್ಥಿತಿ ಸದ್ಯ ಸುಧಾರಿಸಿದ್ದು, ರಾಜ್ಯ ರಾಜಧಾನಿ ಮತ್ತು ಅಸ್ಸೋಂನ ಹಲವು ಭಾಗಗಳಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ.
ಈ ವಾರದ ಆರಂಭದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸುಮಾರು 26 ಜನರಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಸದ್ಯ ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಸ್ಸೋಂ ಪೊಲೀಸ್ ಮುಖ್ಯಸ್ಥ ಬಿ.ಜೆ. ಮಂತಾ ತಿಳಿಸಿದ್ದಾರೆ.