ಕಾಬೂಲ್: ಮೋಟರ್ ಸೈಕಲ್ ಮೇಲೆ ಬಂದ ವ್ಯಕ್ತಿಯೊಬ್ಬ ಬಾಂಬ್ ಬ್ಲಾಸ್ಟ್ ಮಾಡಿರುವ ಕಾರಣ, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದರಲ್ಲಿ ಒಬ್ಬ ಮಗು ಸೇರಿದೆ. ಉಳಿದಂತೆ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಭರದ ಕಾರ್ಯಾಚರಣೆ ನಡೆಸಿ, ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದಾರೆ. ಘಟನೆ ನಡೆದ ಕೆಲ ದೂರದಲ್ಲಿ ಅಫ್ಘಾನ್ ಆರ್ಮಿ ಬಸ್ವೊಂದು ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಘಟನೆ ಹಿಂದೆ ಉಗ್ರರ ಕೈವಾಡವಿರುವುದು ಮೆಲ್ನೋಟಕ್ಕೆ ಸಾಬೀತುಗೊಂಡಿದೆ. ಆದರೆ ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿಲ್ಲ. ಘಟನೆಗೆ ಅಲ್ಲಿನ ಗವರ್ನರ್ ತೀವ್ರ ಸಂತಾಸ ವ್ಯಕ್ತಪಡಿಸಿದ್ದಾರೆ.