ನವದೆಹಲಿ: ಪ್ರಧಾನಿ ಮೋದಿ, ರಾಷ್ಟ್ರಪತಿ ಹಾಗು ಇತರೆ ಗಣ್ಯರು ಹಾಗು ವಿವಾದಾತ್ಮಕ ವಿಚಾರಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ರಾಜ್ಯಸಭಾ ಸಚಿವಾಲಯದ ಉಪನಿರ್ದೇಶಕರೊಬ್ಬರನ್ನು ತಮ್ಮ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅಷ್ಟೇ ಅಲ್ಲದೆ, ಅವರನ್ನು ಬಂಧಿಸಲಾಗಿದೆ.
ಉಪನಿರ್ದೇಶಕ ಹಸನ್ನಂತೆ 40 ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಹಾಗಾಗಿ ಇಷ್ಟು ಮಂದಿ ಅಧಿಕಾರಿಗಳಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಹಸನ್ ಅವರು ಪ್ರಧಾನಿ, ಕೇಂದ್ರ ಸಚಿವರು, ಹಲವು ಮುಖ್ಯಮಂತ್ರಿಗಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹಾಗೂ ವ್ಯಂಗ್ಯಭರಿತ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅಂತಹ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೆಲವು ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕಿದ್ದು ಸಚಿವಾಲಯದ ಕೆಂಗಣ್ಣಿಗೆ ಕಾರಣವಾಗಿದೆ.