ETV Bharat / bharat

ಜೆಎನ್‌ಯು, ಜಾಮಿಯಾ ಹೆಸರು ಕೆಡಿಸಲು ಪಯತ್ನಿಸಿದರೆ ಸಹಿಸುವುದಿಲ್ಲ: ಕೇಂದ್ರ ಸಚಿವ ಪೋಕ್ರಿಯಾಲ್ - ಜಾಮಿಯಾ ಮಿಲಿಯಾ ಇಸ್ಲಾಮಿಯಾ

ಜೆಎನ್‌ಯು, ಜಾಮಿಯಾ ಮಿಲಿಯಾ ಸಂಸ್ಥೆಗಳ ಹೆಸರು ಕೆಡಿಸಲು ಪ್ರಯತ್ನಿಸುವವರ ಕ್ರಮವನ್ನ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.

Attempt to denigrate institutions like JNU, Jamia will not be tolerate
ರಮೇಶ್ ಪೋಖ್ರಿಯಾಲ್ ನಿಶಾಂಕ್
author img

By

Published : Feb 16, 2020, 11:55 PM IST

ಹರಿದ್ವಾರ(ಉತ್ತರಾಖಂಡ್): ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮುಂತಾದ ಉತ್ತಮ ಸಂಸ್ಥೆಗಳನ್ನು ಕೆಣಕಲು ಪ್ರಯತ್ನಿಸಿದರೆ ಸಹಿಸಲಾಗುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ರಮೇಶ್ ಪೋಖ್ರಿಯಾಲ್ ನಿಶಾಂಕ್, ಕೇಂದ್ರ ಸಚಿವ

'ಜೆಎನ್‌ಯು, ಜಾಮಿಯಾ ಅಥವಾ ಇತರೆ ಯಾವುದೇ ಸಂಸ್ಥೆಗಳಾಗಿರಲಿ, ಇವೆಲ್ಲವೂ ತುಂಬಾ ಒಳ್ಳೆಯವು. ಈ ಸಂಸ್ಥೆಗಳ ಹೆಸರು ಕೆಡಿಸಲು ಪ್ರಯತ್ನಿಸುವವರ ಕ್ರಮವನ್ನ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ' ಎಂದು ಪೋಖ್ರಿಯಾಲ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ವರ್ಷ ಡಿಸೆಂಬರ್ 15 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗ್ರಂಥಾಲಯದೊಳಗೆ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇನ್ನು ಈ ವಿಡಿಯೋವನ್ನ ನಾವು ಬಿಡುಗಡೆ ಮಾಡಿಲ್ಲ ಎಂದು ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದ್ದು, ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.