ಹಲ್ದ್ವಾನಿ (ಉತ್ತರಾಖಂಡ್): ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಭರ್ಜರಿ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟ, ಅವರ ಅಭಿಮಾನಿಗಳು ಒಂದಾಲ್ಲ ಒಂದು ಸೇವೆಯ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ.
ಉತ್ತರಾಖಂಡ್ನ ಆಟೋ ಚಾಲಕ ಜಮುನ ಪ್ರಸಾದ್ ಅವರು ಪ್ರಯಾಣಿಕರಿಗೆ ಉಚಿತ ಸೇವೆ ನೀಡಲು ಮುಂದಾಗಿದ್ದಾರೆ. ಹಲ್ದ್ವಾನಿ ನಿವಾಸಿ ಜಮುನಾ ಪ್ರಸಾದ್, ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಪ್ರಯಾಣಿಕರಿಗೆ ಯಾವುದೇ ಶುಲ್ಕವಿಲ್ಲದೆ ಅವರು ಹೇಳಿದ ಸ್ಥಳಕ್ಕೆ ಕರೆದೊಯುತ್ತೇನೆ ಎಂದು ಹೇಳಿದ್ದಾರೆ.
ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಿರುವುದು ನನಗೆ ಅತೀವ ಸಂತಸವಾಗುತ್ತಿದೆ. ಹೀಗಾಗಿ, ಅವರ ಪ್ರಮಾಣ ವಚನದ ದಿನದವರೆಗೂ ಉಚಿತ ಸಂಚಾರ ಒದಗಿಸುವ ಪ್ರತಿಜ್ಞೆ ಮಾಡಿದ್ದೇನೆ ಎಂದರು.
ಮೇ 30ರ ಸಂಜೆ 7 ಗಂಟೆಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.