ನವದೆಹಲಿ: ಅಯ್ಯೋಧ್ಯೆಯಲ್ಲಿನ ರಾಮ ಜನ್ಮಭೂಮಿ- ಬಾಬರಿ ಮಸೀದಿ ಸಂಬಂಧಿಸಿದ ಬಹುಕಾಲದ ವಿವಾದದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಸಲಿದ್ದು, ಮುನ್ನೆಚ್ಚರಿಕ ಕ್ರಮವಾಗಿ ದೇಶಾದ್ಯಂತ ಶಾಂತಿ- ಸುವ್ಯವಸ್ಥೆ ಕಾಪಾಡಲು ಕಟ್ಟೆಚ್ಚರ ವಹಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿಗಳಾದ ಗೊಗೊಯಿ ನೇತೃತ್ವದ ಪಂಚಪೀಠದಲ್ಲಿನ ಎಸ್. ಎ. ಬೊಬ್ಡೆ, ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ ಹಾಗೂ ಎಸ್.ಎ ನಜೀರ್ ಅವರು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಕಾನೂನು ಸುವ್ಯವಸ್ಥೆಯ ವಿಚಾರದಲ್ಲಿ ಎಚ್ಚರವಾಗಿರುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರವು ಸೂಚನೆ ನೀಡಿದೆ. ಉತ್ತರ ಪ್ರದೇಶದ ಅಯೋಧ್ಯೆಗೆ ಅರೆಸೇನಾಪಡೆಯ 4,000 ಸಿಬ್ಬಂದಿ ಕಳುಹಿಸಲಾಗಿದೆ. ತೀರ್ಪು ಯಾರ ಪರವಾಗಿ ಬಂದರೂ ಜನರು ಶಾಂತಿ ಕದಡಬಾರದು ಎಂದು ಎರಡೂ ಧರ್ಮಗಳ ಮುಖಂಡರು ಜನರಿಗೆ ಕರೆ ನೀಡಿದ್ದಾರೆ.
ಮಧ್ಯಪ್ರದೇಶ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ ಮತ್ತು ದೆಹಲಿಯಲ್ಲಿ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಕಾಲು ರಜೆ ಇರಲಿದೆ. ಉತ್ತರ ಪ್ರದೇಶ, ಗೋವಾ ಮತ್ತು ದೆಹಲಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಮತ್ತು ಕರ್ನಾಟಕದ ಬೆಂಗಳೂರಲ್ಲಿ ಬೆಳಗ್ಗೆ 7ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷೆನ್ 144 ಹೇರಲಾಗಿದೆ. ಸಭೆ ನಡೆಸುವುದು, ಗುಂಪುಗೂಡುವುದು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಬಹುಹಂತಗಳ ರಕ್ಷಣಾ ವ್ಯವಸ್ಥೆಯನ್ನ ಜಾರಿಗೊಳಿಸಿಲಾಗಿದೆ. ಪರಿಸ್ಥಿತಿಯ ಅವಲೋಕನ್ ನಡೆಸಲು ಡ್ರೋಣ್ ಬಳಕೆ ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿಗೆ ಒಂದು ತಿಂಗಳಿಂದ ಸತತ ತರಬೇತಿ ನೀಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದರೆ ಭಯೋತ್ಪಾದನ ನಿಗ್ರಹದಳ, ಬಾಂಬ್, ನಿಷ್ಕ್ರಿಯ ದಳ, ವಿಧ್ವಂಸಕ ಕೃತ್ಯತಡೆ ಹಾಗೂ ಕ್ಷಿಪ್ರ ಕಾರ್ಪಡೆ ಕಾರ್ಯೋನ್ಮುಖ ಆಗಲಿವೆ. ತುರ್ತು ಪರಿಸ್ಥಿತಿಯಲ್ಲಿ ಬಳಕೆಗೆ ಲಖನೌದಲ್ಲಿ ಎರಡು ಹೆಲಿಕಾಫ್ಟರ್ಗಳನ್ನು ಸಜ್ಜುಗೊಳಿಸಲಾಗಿದೆ.