ETV Bharat / bharat

ಬಾಬರಿ ಮಸೀದಿ ಪ್ರಕರಣ ರದ್ದು ಮಾಡಿ: ನ್ಯಾಯಾಲಯಕ್ಕೆ ಫಿರ್ಯಾದಿ ಅನ್ಸಾರಿ ಮನವಿ! - ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಬೇಕು

ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ರದ್ದುಗೊಳಿಸಿ ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಬೇಕು ಎಂದು ಫಿರ್ಯಾದಿ ಇಕ್ಬಾಲ್ ಅನ್ಸಾರಿ ಒತ್ತಾಯಿಸಿದ್ದಾರೆ.

Babri Masjid plaintiff wants demolition case to be quashed
ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ರದ್ದುಗೊಳಿಸಿ
author img

By

Published : Sep 17, 2020, 12:13 PM IST

ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ರದ್ದುಗೊಳಿಸಿ, ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಬೇಕು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಬಾಬರಿ ಮಸೀದಿ ಪರ ಫಿರ್ಯಾದಿ ಇಕ್ಬಾಲ್ ಅನ್ಸಾರಿ ಒತ್ತಾಯಿಸಿದ್ದಾರೆ.

ವಿಶೇಷ ಸಿಬಿಐ ನ್ಯಾಯಾಲಯವು ಸೆಪ್ಟೆಂಬರ್ 30ರಂದು ತನ್ನ ತೀರ್ಪನ್ನು ಪ್ರಕಟಿಸಲಿದ್ದು, ಎಲ್.ಕೆ.ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಮತ್ತು ವಿನಯ್ ಕಟಿಯಾರ್ ಸೇರಿದಂತೆ ಹಲವು ಮಂದಿ ಆರೋಪಿಗಳು ಪಟ್ಟಿಯಲ್ಲಿದ್ದಾರೆ.

ವಿವಾದದ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ತೀರ್ಪು ನೀಡಿದೆ ಮತ್ತು ದೇವಾಲಯ ನಿರ್ಮಾಣ ಪ್ರಕ್ರಿಯೆಯೂ ಪ್ರಾರಂಭವಾಗಿದೆ ಎಂದು ಅನ್ಸಾರಿ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಹಲವಾರು ಆರೋಪಿಗಳು ಈಗ ಜೀವಂತವಾಗಿಲ್ಲ ಮತ್ತು ಹಾಜರಿದ್ದವರು ತುಂಬಾ ವಯಸ್ಸಾದವರು. ಪ್ರಕರಣಗಳನ್ನು ರದ್ದುಪಡಿಸಬೇಕು ಮತ್ತು ಈ ವಿಷಯವನ್ನು ಕೊನೆಗೊಳಿಸಲು ಅವಕಾಶ ನೀಡಬೇಕು ಎಂದು ನಾನು ಬಯಸುತ್ತೇನೆ. ಸುಪ್ರೀಂಕೋರ್ಟ್ ತೀರ್ಪಿನ ನಂತರ, ಯಾವುದೇ ವಿವಾದಗಳು ಉಳಿದಿಲ್ಲ ಎಂದು ಹೇಳಿದ್ದಾರೆ.

ಹಿಂದೂಗಳು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕಲು ಮತ್ತು ದೇಶದ ಸಾಮಾಜಿಕ ಚೌಕಟ್ಟನ್ನು ಬಲಪಡಿಸಲು ಅವಕಾಶ ನೀಡಬೇಕು ಎಂದು ಅನ್ಸಾರಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.