ಪುದುಚೇರಿ: ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಹಳದಿ ಪಡಿತರ ಚೀಟಿ ಹೊಂದಿರುವ ಎಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ಯೋಜನೆಗೆ ಉದ್ದೇಶಪೂರ್ವಕವಾಗಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅಡ್ಡಿಪಡಿಸಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಎಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ವಿತರಿಸಲು ಅನುಮತಿ ನೀಡಿದ ಬಳಿಕ ಬೇಡಿ ಅಡ್ಡಿಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ದೂರಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇತ್ತೀಚೆಗೆ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಪಿಎಲ್ ಕುಟುಂಬಗಳಿಗೆ ಅಕ್ಕಿ ಸರಬರಾಜು ಮಾಡಲು ಅನುಮತಿ ನೀಡಿದ್ದರು. ಅದರಂತೆ ಅಕ್ಕಿ ನಿಡಲಾಗುತ್ತದೆ ಎಂದರು.