ಕೋಲ್ಕತ್ತಾ( ಪಶ್ಚಿಮ ಬಂಗಾಳ): ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ಮಹಿಳೆ ಮೇಲೆ ಮಂತ್ರವಾದಿಯೊಬ್ಬ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಮಹಿಳೆಯೊಬ್ಬಳು ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದ್ದಳು. ಆದ್ದರಿಂದ ಸ್ಥಳೀಯರು ಆಕೆಯನ್ನು ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದರು. ಮಂತ್ರವಾದಿ ಆಕೆಯ ಮೈ ಮೇಲೆ ದೆವ್ವ ಬಂದಿದೆ ಎಂದು ಪೊರಕೆಯಿಂದ ಹೊಡೆದಿದ್ದಾನೆ ಎನ್ನಲಾಗಿದೆ.
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದರಿಂದ ಆಕೆ ಇನ್ನಷ್ಟು ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.