ಭೋಪಾಲ್: ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2020ಗೆ ಅನುಮೋದನೆ ನೀಡಲಾಯಿತು.
ಈ ಮಸೂದೆಯಡಿಯಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ 1-5 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಕ, ಮಹಿಳೆ ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ಬಲವಂತವಾಗಿ ಮತಾಂತರಗೊಳಿಸಿದರೆ ಕನಿಷ್ಠ 2-10 ವರ್ಷಗಳ ಜೈಲು ಶಿಕ್ಷೆ ಹಾಗೂ ಕನಿಷ್ಠ 50,000 ರೂ. ಜುಲ್ಮಾನೆ ಹಾಕಲಾಗುತ್ತದೆ.
ಹೊಸ ಮಸೂದೆಯಡಿಯಲ್ಲಿ ಯಾರೊಬ್ಬರ ಮೇಲೆ ಧಾರ್ಮಿಕ ಮತಾಂತರವನ್ನು ಒತ್ತಾಯಿಸಿದರೆ 1-5 ವರ್ಷ ಜೈಲು ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ರೂ. ದಂಡವನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದರು.
ಇದನ್ನೂ ಓದಿ: ಮೋದಿ ಮನವಿಗೆ ಮನಸ್ಸು ಬದಲಾಯಿಸಿದ ರೈತರು.. ಇಂದು ಮಧ್ಯಾಹ್ನ 2 ಗಂಟೆಗೆ ಸಭೆ
ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ನಂತರ ಲವ್ ಜಿಹಾದ್ ಕಾನೂನನ್ನು ಜಾರಿಗೊಳಿಸಿದ ಮೂರನೇ ಬಿಜೆಪಿ ಆಡಳಿತದ ರಾಜ್ಯ ಮಧ್ಯಪ್ರದೇಶವಾಗಿದೆ.
ಡಿಸೆಂಬರ್ 28ರಿಂದ ಮೂರು ದಿನಗಳ ಕಾಲ ಮಧ್ಯಪ್ರದೇಶ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇದೇ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು. ಡಿಸೆಂಬರ್ 28ರಿಂದ 30ರವರೆಗೆ ಸದನದ ಮೂರು ಸಭೆಗಳು ನಡೆಯಲಿವೆ.
ಈ ವಾರದ ಆರಂಭದಲ್ಲಿ ಹಿಮಾಚಲ ಪ್ರದೇಶ ಸರ್ಕಾರವು ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2006ಕ್ಕೆ ಅನುಮತಿ ನೀಡಿ, ರಾಜ್ಯದಲ್ಲಿ ಕಾನೂನನ್ನಾಗಿ ಮಾಡಿತು. 2019ರ ಆಗಸ್ಟ್ 30ರಂದು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ 2019ರ ಹಿಮಾಚಲ ಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಗೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಅನುಮೋದನೆ ನೀಡಿದ್ದರು.