ನವದೆಹಲಿ: ಭಾರತೀಯ ಸಂಸದೀಯ ವ್ಯವಸ್ಥೆಯ ಮೇಲ್ಮನೆ ಎನಿಸಿಕೊಂಡಿರುವ ರಾಜ್ಯಸಭೆಯ 55 ಸ್ಥಾನಗಳು ಏಪ್ರಿಲ್ 2020ರಲ್ಲಿ ತೆರವಾಗಲಿದ್ದು, ಮಾರ್ಚ್ 26ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ಏಪ್ರಿಲ್ನಲ್ಲಿ ರಾಜ್ಯಸಭೆಯ 55 ಸದಸ್ಯರು ನಿವೃತ್ತಿಯಾಗುತ್ತಿದ್ದಾರೆ. ಹೀಗಾಗಿ ಈ ಸ್ಥಾನಗಳ ಭರ್ತಿಗೆ ದ್ವೈವಾರ್ಷಿಕ ಚುನಾವಣೆಗಳು ನಡೆಯಲಿದೆ ಎಂದು ಆಯೋಗ ತಿಳಿಸಿದೆ.
250 ಸದಸ್ಯ ಬಲದ ರಾಜ್ಯಸಭೆಯಲ್ಲಿ ಸದ್ಯ ಬಿಜೆಪಿ 83 ಸದಸ್ಯರನ್ನು ಹೊಂದಿದ್ದರೆ, ಕಾಂಗ್ರೆಸ್ 46 ಸದಸ್ಯರನ್ನು ಹೊಂದಿದೆ. ಈ ವರ್ಷ ಖಾಲಿಯಾಗುತ್ತಿರುವ 69 ಸದಸ್ಯರಲ್ಲಿ 18 ಜನ ಬಿಜೆಪಿಯವರಾಗಿದ್ದಾರೆ.
ರಾಜ್ಯವಾರು ಚುನಾವಣೆ ನಡೆಯುವುದರಿಂದ ಆಯಾ ರಾಜ್ಯಗಳ ವಿಧಾನಸಭೆಯಲ್ಲಿ ಪಕ್ಷದ ಸ್ಥಿತಿಗತಿ ಹೇಗಿದೆ ಎನ್ನುವುದು ಚುನಾವಣೆಯಲ್ಲಿ ಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಲ ರಾಜ್ಯಗಳ ಅಧಿಕಾರವನ್ನು ಬಿಜೆಪಿ ಕಳೆದುಕೊಂಡಿರುವುದರಿಂದ ಹೆಚ್ಚುವರಿ ಸೀಟುಗಳನ್ನು ಗಳಿಸಿ ರಾಜ್ಯಸಭೆ ಸಂಖ್ಯೆ ಹೆಚ್ಚಿಸಿಕೊಳ್ಳುವ ಒತ್ತಾಸೆಯ ಮೇಲೆ ಪರಿಣಾಮ ಬೀರಲಿದೆ. ಆದರೆ ಕಾಂಗ್ರೆಸ್ ಅಲ್ಪ ಮಟ್ಟಿನ ಯಶಸ್ಸುಗಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣವೇನೆಂದರೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಮಹಾರಾಷ್ಟ್ರ ಸರ್ಕಾರ ಹೊಂದಿರುವುದು ಕಾಂಗ್ರೆಸ್‌ಗೆ ಲಾಭವಾಗಬಹುದು.