ಮುಜಾಫರ್ಪುರ್(ಬಿಹಾರ): 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಮುಜಾಫರ್ಪುರ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಕಾಮುಕನಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಸದ್ಯ ಬಾಲಕಿಯನ್ನ ವೈದ್ಯಕೀಯ ತಪಾಸಣೆಗೋಸ್ಕರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿ ಮನೆಗೆ ಬರುತ್ತಿದ್ದ ವೇಳೆ ಆಕೆಯನ್ನು ಅಪಹರಿಸಿರುವ ವಿರೇಂದ್ರ ಮಹ್ತಾ ಹಾಗೂ ರಂಜನ್ ಕುಮಾರ್ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿ, ನಂತರ ಅತ್ಯಾಚಾರವೆಸಗಿದ್ದಾರೆ. ಘಟನೆಯಿಂದ ಬಾಲಕಿ ಮೂರ್ಚೆ ಹೋಗಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಇಬ್ಬರು ಕಾಮುಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.