ಪಾಟ್ನಾ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಕಂಬಂಧಬಾಹುಗಳನ್ನು ವಿಸ್ತರಿಸುತ್ತಿದೆ. ವೈರಸ್ ಹರಡುವಿಕೆ ತಡೆಯಲು ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಧ್ಯೆ ಬಿಹಾರದಲ್ಲಿ ಒಂದೇ ಕುಟುಂಬದ ಒಂಬತ್ತು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಅಲ್ಲಿನ ಜನರ ಆತಂಕ ಹೆಚ್ಚಿಸಿದೆ.
ಬಿಹಾರದಲ್ಲಿ ಈವರೆಗೆ 51 ಕೋವಿಡ್-19 ಪ್ರಕರಣಗಳು ಕಂಡು ಬಂದಿದ್ದು, ಇಂದು ಒಂದೇ ಹೊಸದಾಗಿ 12 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಸಿವಾನ್ದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿನ ಜನರು ಹೆಚ್ಚಾಗಿ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ವಾಪಸ್ಸು ಬಂದವರಿಂದ ಸೋಂಕು ಹರಡಿರುವ ಸಾಧ್ಯತೆಯನ್ನು ಆರೋಗ್ಯ ಸಚಿವರ ಕಾರ್ಯದರ್ಶಿ ಸಂಜಯ್ ಕುಮಾರ್ ತಿಳಿಸಿದ್ದಾರೆ.
ಬಿಹಾರದ 11 ಜಿಲ್ಲೆಗಳಲ್ಲಿ ಕೋವಿಡ್-19 ಕಾಣಿಸಿಕೊಂಡಿದ್ದು, ಸಿವಾನ್ದಲ್ಲಿ 20 ಮಂದಿ, ಪಾಟ್ನಾ 5, ಮಂಗೂರ್ 7, ನಲಂದಾ 2,ಗಯಾ 5,ಗೋಪಾಲ್ಗಂಜ್ 3 ಕೇಸ್ ಕಾಣಿಸಿಕೊಂಡಿವೆ.
ಮಾರಕ ವೈರಾಣು ರಾಜ್ಯದಲ್ಲಿ ಓರ್ವ ವ್ಯಕ್ತಿಯನ್ನು ಬಲಿ ಪಡೆದಿದೆ.