ಪಾಟ್ನಾ : ಬಿಹಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಕಟಿಹಾರ್ ಶಾಸಕ ತಾರ್ಕಿಶೋರ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಸುಶೀಲ್ ಕುಮಾರ್ ಮೋದಿ ಮಾಹಿತಿ ನೀಡಿದ್ದಾರೆ. ತಾರ್ಕಿಶೋರ್ ಪ್ರಸಾದ್ ಅವರೇ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ.
ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರ ಸಂಪುಟದಲ್ಲಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸುಶೀಲ್ ಕುಮಾರ್ ಮೋದಿ ಕಾರ್ಯನಿರ್ವಹಿಸಿದ್ದರು. ಹೊಸ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಮೋದಿ, ಪಕ್ಷದ ಕಾರ್ಯಕರ್ತ ಹುದ್ದೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನನಗೆ ನೀಡಲಾಗುವ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ತಾರ್ಕಿಶೋರ್ಗೆ ಟ್ವೀಟ್ ಮೂಲಕ ಅಭಿನಂದನೆ ಹೇಳಿದ್ದಾರೆ.
-
तारकिशोरजी को भाजपा विधानमंडल का नेता सर्वसम्मति से चुने जाने पर कोटिशः बधाई !
— Sushil Kumar Modi (@SushilModi) November 15, 2020 " class="align-text-top noRightClick twitterSection" data="
">तारकिशोरजी को भाजपा विधानमंडल का नेता सर्वसम्मति से चुने जाने पर कोटिशः बधाई !
— Sushil Kumar Modi (@SushilModi) November 15, 2020तारकिशोरजी को भाजपा विधानमंडल का नेता सर्वसम्मति से चुने जाने पर कोटिशः बधाई !
— Sushil Kumar Modi (@SushilModi) November 15, 2020
ಬಿಜೆಪಿ ಮತ್ತು ಸಂಘ ಪರಿವಾರ ಕಳೆದ 40 ವರ್ಷದ ರಾಜಕೀಯ ಜೀವನದಲ್ಲಿ ನನಗೆ ಬಹಳಷ್ಟು ಅವಕಾಶಗಳನ್ನು ಕೊಟ್ಟಿದೆ. ಕೆಲವರಿಗೆ ಅದು ದೊರೆತಿರಲು ಸಾಧ್ಯವಿಲ್ಲ. ನನಗೆ ಪಕ್ಷದಲ್ಲಿ ನೀಡಲಾಗುವ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಪಕ್ಷದ ಕಾರ್ಯಕರ್ತನ ಹುದ್ದೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಬಿಹಾರಕ್ಕೆ ಮತ್ತೊಮ್ಮೆ ನಿತೀಶ್ ಸಾರಥಿ: ಮುಖ್ಯಮಂತ್ರಿಯಾಗಿ ನಾಳೆಯೇ ಪ್ರಮಾಣವಚನ
ಬಿಜೆಪಿ ಶಾಸಕಾಂಗ ಪಕ್ಷದ ಉಪನಾಯಕಿಯಾಗಿ ಆಯ್ಕೆಯಾದ ಬೆಟ್ಟಿಯಾ ಶಾಸಕಿ ರೇಣು ದೇವಿ ಅವರನ್ನೂ ಮೋದಿ ಅಭಿನಂದಿಸಿದ್ದು, ನಾಲ್ಕನೇ ಬಾರಿ ಶಾಸಕಿಯಾಗಿ ಆಯ್ಕೆಯಾದ, ನೋನಿಯಾ ಸಮುದಾಯದಿಂದ ಬಂದ ರೇಣು ದೇವಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ಉಪನಾಯಕಿಯಾಗಿ ಆಯ್ಕೆಯಾಗಿದ್ದಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.
ಇದಕ್ಕೂ ಮೊದಲು ನಡೆದ ಎನ್‌ಡಿಎ ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಅಲ್ಲದೆ, ಸತತ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿಯೂ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ 243 ಸದಸ್ಯರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 125 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ಬಹುಮತ ಗಳಿಸಿದೆ.