ಪಾಟ್ನಾ: ಕಾಮುಕನೋರ್ವ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದು, ಈ ವೇಳೆ ಪ್ರತಿರೋಧ ಒಡ್ಡಿದ್ದಕ್ಕೆ ಆಕೆಯ ಮೇಲೆ ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆ ತನ್ನ ಸಹೋದರಿ ಜತೆ ಜಾತ್ರೆ ನೋಡಲು ತೆರಳುತ್ತಿದ್ದ ವೇಳೆ ನಡುದಾರಿಯಲ್ಲಿ ಆಕೆಯನ್ನ ದುಷ್ಕರ್ಮಿಯೋರ್ವ ಅಡ್ಡಗಟ್ಟಿದ್ದಾನೆ. ಈ ವೇಳೆ ಕೈಯಲ್ಲಿ ಬಂದೂಕು ಹಿಡಿದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಪ್ರತಿರೋಧ ಒಡ್ಡಿದ್ದಕ್ಕಾಗಿ ಆಕೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನ ಪಾಟ್ನಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದ ವೇಳೆ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.