ETV Bharat / bharat

ಉಪಚುನಾವಣೆಯ ಸಿದ್ಧತೆಗಳನ್ನ ತೀವ್ರಗೊಳಿಸಿದ ಬಿಜೆಪಿ - ಕಾಂಗ್ರೆಸ್

author img

By

Published : Jul 6, 2020, 12:55 PM IST

ಒಟ್ಟು 22 ಶಾಸಕರು ವಿಧಾನಸಭೆಯ ಸದಸ್ಯತ್ವಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ, ಇಬ್ಬರು ಶಾಸಕರ ನಿಧನದ ನಂತರ ಎರಡು ಸ್ಥಾನಗಳು ಖಾಲಿಯಾಗಿವೆ. ಹೀಗಾಗಿ ಒಟ್ಟು 24 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

election
election

ಭೋಪಾಲ್ (ಮಧ್ಯಪ್ರದೇಶ): ರಾಜ್ಯದಲ್ಲಿ ಉಪಚುನಾವಣೆಯ ದಿನಾಂಕ ನಿಗದಿಯಾಗುವ ಮೊದಲೇ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮುಂಬರುವ ಉಪಚುನಾವಣೆಗೆ ಸಜ್ಜಾಗುತ್ತಿವೆ.

ಬಿಜೆಪಿ "ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯುವ" ಸಂದೇಶ ನೀಡಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಚರ್ಚೆಗಳ ಮೂಲಕ ಸಂಭವನೀಯ ಅಭ್ಯರ್ಥಿಗಳ ಕುರಿತು ನಿರ್ಧಾರ ಕೈಗೊಳ್ಳುತ್ತಿದೆ.

ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ, ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕುಸಿದ ಬಳಿಕ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಯಿತು.

ಆಡಳಿತ ನಡೆಸುತ್ತಿರುವ ಬಿಜೆಪಿಗೆ ಪ್ರಸ್ತುತ ಸಂಪೂರ್ಣ ಬಹುಮತವಿಲ್ಲದ ಕಾರಣ ಉಪಚುನಾವಣೆ ರಾಜಕೀಯ ದೃಷ್ಟಿಕೋನದಿಂದ ಸಾಕಷ್ಟು ನಿರ್ಣಾಯಕವಾಗಿದ್ದು, ಬಹುಮತ ಪಡೆಯಲು ಬಿಜೆಪಿ ಕನಿಷ್ಠ 9 ಸ್ಥಾನಗಳನ್ನು ಗೆಲ್ಲಬೇಕು.

ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಸ್ಥಾನಗಳಿದ್ದು, ಬಿಜೆಪಿ 107 ಸ್ಥಾನಗಳನ್ನು ಹೊಂದಿದೆ. ಸಂಪೂರ್ಣ ಬಹುಮತಕ್ಕಾಗಿ 116 ಶಾಸಕರನ್ನು ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ, ವಿಧಾನಸಭೆಯಲ್ಲಿ ಸಂಪೂರ್ಣ ಬಹುಮತ ಪಡೆಯಲು ಬಿಜೆಪಿ ಉಪಚುನಾವಣೆಯಲ್ಲಿ 24 ಕ್ಷೇತ್ರಗಳ ಪೈಕಿ 9 ಸ್ಥಾನಗಳನ್ನು ಗೆಲ್ಲುವುದು ಅವಶ್ಯಕವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.