ಫಿರೋಜಾಬಾದ್: ನಿನ್ನೆ ತಡರಾತ್ರಿ ನಗರದಲ್ಲಿ ಬಿಜೆಪಿಯ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ಹೌದು, ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು ಡಿಕೆ ಗುಪ್ತಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ನಂತರ ಗುಪ್ತಾರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಬಿಜೆಪಿ ನಾಯಕ ಡಿ.ಕೆ ಗುಪ್ತಾ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.