ETV Bharat / bharat

ಬಿಜೆಪಿ ಮಿಂಚಿನ ಬಳ್ಳಿ ಇನ್ನಿಲ್ಲ... ಹೇಗಿತ್ತು ಸ್ವರಾಜ್​ ಜರ್ನಿ - former foreign affairs minister

ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್​ ಅವರು ಇಂದು ಹೃದಯಾಘಾತದಿಂದ ನವದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Sushma Swaraj passes away
author img

By

Published : Aug 6, 2019, 11:42 PM IST

ಭಾರತದ ಮಿಂಚಿನ ಬಳ್ಳಿ ಎಂದು ಹೆಸರು ಮಾಡಿದ್ದ ಸುಷ್ಮಾ ಸ್ವರಾಜ್​ ಬಿಜೆಪಿ ಅಧಿಕಾರಕ್ಕೇರದ ದಿನಗಳಲ್ಲಿ ಪಕ್ಷದ ಮುಖವಾಣಿಯಾಗಿದ್ದರು. ತಮ್ಮ ಮಾತಿನ ಮೂಲಕ ಹೆಸರು ಮಾಡಿದ್ದ ಅವರು, ಅಂದಿನ ಪತ್ರಿಕೆಗಳ ಕಣ್ಮಣಿ ಆಗಿದ್ದರು. ಎಲ್ಲರೂ ಇವರನ್ನು ಬಿಜೆಪಿಯ ಮಿಂಚಿನ ಬಳ್ಳಿ ಎಂದೇ ಕರೆಯುತ್ತಿದ್ದರು.

ಮಧ್ಯಪ್ರದೇಶದ ವಿದಿಶಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ 66 ವರ್ಷದ ಸುಷ್ಮಾ, ಹರಿಯಾಣ ಮೂಲದವರಾಗಿದ್ದು, ರಾಜಕೀಯ ಪ್ರವೇಶಕ್ಕೂ ಮೊದಲು ವಕೀಲ ವೃತ್ತಿಯಲ್ಲಿದ್ದರು. ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿರುವ ಸುಷ್ಮಾ, 1977ರಲ್ಲಿ 25 ನೆಯ ವಯಸ್ಸಿಗೆ ಹರಿಯಾಣದ ಅತ್ಯಂತ ಕಿರಿಯ ಸಂಪುಟ ಸಚಿವೆ ಎಂಬ ಹೆಸರು ಪಡೆದಿದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಮಾಹಿತಿ ಪ್ರಸಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಸುಷ್ಮಾ ಸ್ವರಾಜ್, ಪ್ರಸ್ತುತ ಮೋದಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜಕೀಯ ನಿವೃತ್ತಿ ಘೋಷಿಸಿದ್ದರು.
ನನಗೆ ಆರೋಗ್ಯ ಸ್ಥಿತಿ ಅಷ್ಟು ಉತ್ತಮವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜಕೀಯ ನಿವೃತ್ತಿ ನಿರ್ಧಾರ ಕೈಗೊಂಡಿದ್ದೇನೆ ಎಂದು ಲೋಕಸಭೆ ಚುನಾವಣೆಗೂ ಮುನ್ನವೇ ಘೋಷಿಸಿದ್ದರು.

ಬಾಲ್ಯ ಜೀವನ: ಸುಷ್ಮಾ ಸ್ವರಾಜ್ ಅವರು 1952ರ ಫೆಬ್ರವರಿ ೧೪ ರಂದು ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ ಜನಿಸಿದರು. ಇವರ ತಂದೆ ಹಾರ್ದೇವ್ ಶರ್ಮಾ ಮತ್ತು ತಾಯಿ ಲಕ್ಷ್ಮಿ ದೇವಿ. ಅವರು ಅಂಬಾಲಾ ಕಂಟೋನ್ಮೆಂಟ್​​​ನ ಸನಾತನ ಧರ್ಮ ಕಾಲೇಜಿನಲ್ಲಿ ಸಂಸ್ಕೃತ ಮತ್ತು ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿ ಪಡೆದರು. ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಭ್ಯಾಸ ಮಾಡಿದರು.1973ರಲ್ಲಿ ಭಾರತದ ಸುಪ್ರೀಂ ಕೋರ್ಟ್​ನಲ್ಲಿ ವಕೀಲರಾಗಿ ಅಭ್ಯಾಸ ಆರಂಭಿಸಿದರು.

Sushma Swaraj
Sushma Swaraj

ರಾಜಕೀಯ ಜೀವನ:
ಸುಷ್ಮಾ ಸ್ವರಾಜ್ ಅವರು 1970ರಲ್ಲಿ ರಾಜಕೀಯ ವೃತ್ತಿಜೀವನವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ನೊಂದಿಗೆ ಆರಂಭಿಸಿದರು. ಅವರ ಪತಿ ಸ್ವರಾಜ್ ಕೌಲ್, ಸಮಾಜವಾದಿ ನಾಯಕ ಜಾರ್ಜ್ ಫರ್ನಾಂಡಿಸ್​ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಸುಷ್ಮಾ ಸ್ವರಾಜ್ 1975ರಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಕಾನೂನು ರಕ್ಷಣಾ ತಂಡದ ಅಂಗವಾಗಿದ್ದರು. ಜಯಪ್ರಕಾಶ್ ನಾರಾಯಣರ ಒಟ್ಟು ಕ್ರಾಂತಿಯ ಚಳವಳಿಯಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡರು. ತುರ್ತು ಪರಿಸ್ಥಿತಿಯ ನಂತರ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ನಂತರ ಅವರು ಬಿಜೆಪಿಯ ರಾಷ್ಟ್ರೀಯ ನಾಯಕರಾದರು.

ಶಾಸಕರಾಗಿ ಮೊದಲ ಜರ್ನಿ ಯಾವಾಗ?

ಅವರು 1977 ರಿಂದ 1983ರವರೆಗೆ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು. 25ನೇ ವಯಸ್ಸಿನಲ್ಲಿ ಅಂಬಾಲಾ ಕಂಟೋನ್ಮೆಂಟ್ ಶಾಸನ ಸಭೆಗೆ ಅವಕಾಶ ಪಡೆದರು.
1977 ರ ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ದೇವಿ ಲಾಲ್ ಅವರ ನೇತೃತ್ವದಲ್ಲಿ ಜನತಾ ಪಕ್ಷದ ಸರಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು. ಅವರು 1979ರಲ್ಲಿ ಹರಿಯಾಣ ರಾಜ್ಯದ ಜನತಾ ಪಕ್ಷದ ರಾಜ್ಯ ಅಧ್ಯಕ್ಷರಾದರು. ಅವರು 1987 ರಿಂದ 1990ರ ಅವಧಿಯಲ್ಲಿ ಭಾರತೀಯ ಜನತಾ ಪಾರ್ಟಿ-ಲೋಕಸಭೆ ಒಕ್ಕೂಟದ ಸರಕಾರದಲ್ಲಿ ಹರಿಯಾಣದ ಶಿಕ್ಷಣ ಸಚಿವೆಯಾಗಿದ್ದರು.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆಯಾಗಿ ಸಾಧನೆ
ದಕ್ಷಿಣ ದೆಹಲಿ ವಿಧಾನ ಸಭಾ ಕ್ಷೇತ್ರದಿಂದ 1998 ಮಾರ್ಚ್​​ನಲ್ಲಿ ಎರಡನೆಯ ಅವಧಿಗೆ ಆಯ್ಕೆ ಆಗಿದ್ದರು. ವಾಜಪೇಯಿ ಸರ್ಕಾರದಲ್ಲಿ ದೂರಸಂಪರ್ಕ ಸಚಿವಾಲಯದ ಮಾಹಿತಿ ಮತ್ತು ಪ್ರಸಾರದ ಕೇಂದ್ರ ಸಂಪುಟ ಸಚಿವರಾಗಿ ಕೆಲಸ ಮಾಡಿದ್ದರು.

ವಿದೇಶಾಂಗ ಸಚಿವರಾಗಿ ಮೋದಿ ಅವಧಿಯಲ್ಲಿ ಭಾರಿ ಜನಮನ್ನಣೆ ಗಳಿಸಿದ್ದ ಸುಷ್ಮಾ ಸ್ವರಾಜ್​ ಅಮೆರಿಕ, ರಷ್ಯಾ, ಚೀನಾ, ಜಪಾನ್ ಗಳೊಂದಿಗೆ ಸ್ನೇಹ ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

Intro:Body:

national

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.