ETV Bharat / bharat

ಸಿಎಂ ಉದ್ಧವ್, ಆದಿತ್ಯ ಠಾಕ್ರೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಆರೋಪ: ಬಿಜೆಪಿ ಕಾರ್ಯಕರ್ತನ ಬಂಧನ - ನಾಗ್ಪುರದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ

ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಸದಸ್ಯ ಸಮೀತ್ ಠಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

BJP man held in Nagpur for tweets against Maha CM
ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತನ ಬಂಧನ
author img

By

Published : Oct 25, 2020, 9:30 AM IST

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್‌ ಮಾಡಿ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತರನ್ನು ನಾಗ್ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮುಂಬೈನ ವಿ.ಪಿ. ರಸ್ತೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ಬಿಜೆಪಿ ಐಟಿ ಸೆಲ್ ಸದಸ್ಯ ಸಮೀತ್ ಠಕ್ಕರ್ ಅವರಿಗೆ ನ್ಯಾಯಾಲಯ ತಿಳಿಸಿದರೂ ಅವರು ತಮ್ಮ ಮೊಬೈಲ್ ಫೋನ್ ಅಥವಾ ಲ್ಯಾಪ್‌ಟಾಪ್ ಸಲ್ಲಿಸದೆ ತಪ್ಪಿಸಿಕೊಂಡಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ವ್ಯಕ್ತಿ ಶಿವ ಸೈನಿಕ್ ಎಂಬುವರು ಠಕ್ಕರ್ ವಿರುದ್ಧ ಸೀತಾಬುಲ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಠಕ್ಕರ್ ಅವರನ್ನು ನಾಗ್ಪುರ ಮತ್ತು ಮುಂಬೈ ಪೊಲೀಸ್ ಸಿಬ್ಬಂದಿಯ ಜಂಟಿ ತಂಡ ಬಂಧಿಸಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.