ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಆಯ್ಕೆಯಾಗಿದ್ದು, ಸಂಸದೀಯ ಮಂಡಳಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಮಿತ್ ಶಾ ಗೃಹ ಸಚಿವರಾಗಿ ಮೋದಿ ಸಂಪುಟ ಸೇರಿದ ಹಿನ್ನಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ನೂತನ ಅಧ್ಯಕ್ಷರನ್ನ ಆಯ್ಕೆ ಮಾಡಿದೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಗೃಹ ಸಚಿವ ಅಮಿತ್ ಶಾ ಹೂಗುಚ್ಛ ನೀಡಿ ಅಭಿನಂದಿಸಿದರು.
-
Delhi: Senior BJP leaders present bouquets to JP Nadda at the BJP Parliamentary Board meeting being held at the BJP headquarters. pic.twitter.com/sgvmAx2tym
— ANI (@ANI) June 17, 2019 " class="align-text-top noRightClick twitterSection" data="
">Delhi: Senior BJP leaders present bouquets to JP Nadda at the BJP Parliamentary Board meeting being held at the BJP headquarters. pic.twitter.com/sgvmAx2tym
— ANI (@ANI) June 17, 2019Delhi: Senior BJP leaders present bouquets to JP Nadda at the BJP Parliamentary Board meeting being held at the BJP headquarters. pic.twitter.com/sgvmAx2tym
— ANI (@ANI) June 17, 2019
ಇದರ ಮಧ್ಯೆ ಪಕ್ಷದ ಮುಖ್ಯಸ್ಥರಾಗಿ ಅಮಿತ್ ಶಾ ಮುಂದುವರೆಯುವುದಾಗಿ ಸಭೆಯಲ್ಲಿನಿರ್ಧಾರ ಕೈಗೊಳ್ಳಲಾಗಿದೆ. ಇವರ ಅಧಿಕಾರವಧಿ ಮುಂದಿನ ಆರು ತಿಂಗಳ ಕಾಲ ಇರುತ್ತದೆ. ಇದೇ ವಿಷಯವಾಗಿಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್,ಅಮಿತ್ ಶಾ ನೇತೃತ್ವದಲ್ಲಿ ನಾವು ಅನೇಕ ಚುನಾವಣೆಯಲ್ಲಿ ಗೆಲುವು ದಾಖಲು ಮಾಡಿದ್ದೇವೆ. ಪ್ರಧಾನಿ ಮೋದಿಯವರು ಶಾ ಅವರನ್ನ ಗೃಹ ಸಚಿವರನ್ನಾಗಿ ಆಯ್ಕೆ ಮಾಡಿದ ಬಳಿಕ, ತಮ್ಮ ಮೇಲಿರುವ ಜವಾಬ್ದಾರಿಯನ್ನ ಬೇರೆಯವರಿಗೆ ನೀಡುವಂತೆ ಕೇಳಿಕೊಂಡಿದ್ದರು. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್, ಕೇಂದ್ರ ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ತಾವರ್ ಚಂದ ಗೆಹ್ಲೋಟ್ ಸೇರಿದಂತೆ ಇನ್ನಿತರ ನಾಯಕರು ಪಾಲ್ಗೊಂಡಿದ್ದರು.
ಇಂದು ಆರಂಭವಾದ ಸಂಸತ್ ಅಧಿವೇಶನದ ವೇಳೆ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೊದಲ ಅಧಿವೇಶನ ಇದಾಗಿದ್ದು, ಇದೇ ಜುಲೈ 5 ರಂದು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ.ಇದಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಜ್ಜಾಗಿದ್ದಾರೆ.