ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಸದೀಯ ಸಭೆ ನಡೆಯಿತು
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್, ರಮೇಶ್ ಪೋಖ್ರಿಯಾ ಮತ್ತು ನಿರ್ಮಲಾ ಸೀತಾರಾಮನ್ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದ್ದು, ಬಿಜೆಪಿ ಸಂಸದ ಪ್ರಜ್ಞಾ ಸಿಂಗ್ ಠಾಕೂರ್ ಕೂಡ ಇದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜಿ.ಪಿ ನಡ್ಡಾ ಅವರ ಮೊದಲ ಸಂಸದೀಯ ಪಕ್ಷ ಸಭೆ ಇದಾಗಿದ್ದು, ಮಹಾತ್ಮ ಗಾಂಧೀಜಿ ಕುರಿತಂತೆ ನಿಂದನಾತ್ಮಕ ಹೇಳಿಕೆ ನೀಡಿದ ಅನಂತ್‌ಕುಮಾರ್ ಹೆಗಡೆ ಮೇಲೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ ಎಂಬ ಮಾಹಿತಿ ಪಕ್ಷದ ಮೂಲದಿಂದ ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಹೆಗಡೆಯವರು ಕ್ಷಮೆಯಾಚಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜನರು ಗಾಂಧಿಜೀ ಅವರನ್ನು ಹೇಗೆ ಮಹಾತ್ಮ ಎಂದು ಕರೆಯುತ್ತಾರೋ, ಅವರ ಸ್ವಾತಂತ್ರ್ಯ ಚಳವಳಿ ಒಂದು ದೊಡ್ಡ ನಾಟಕವಾಗಿದ್ದು ಇದು ನಿಜವಾದ ಹೋರಾಟವಲ್ಲ ಎಂದು ನಿಂದಿಸಿದ್ದರು. ಸದ್ಯ ಅವರ ಆ ನಿಂದನಾತ್ಮಕ ಹೇಳಿಕೆ ತೀವ್ರ ಟೀಕೆಗೆ ಒಳಗಾಗಿದೆ.