ನವದೆಹಲಿ: ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾಗೆ ಕೋವಿಡ್-19 ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಬೆನ್ನಲ್ಲೇ ಪಾತ್ರಾರನ್ನು ಗುರ್ಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿಯ ಪ್ರಮುಖ ನಾಯಕರಾಗಿರುವ ಇವರು, ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ.
ಪಕ್ಷದ ಪರ ಮತ್ತು ವಿಕ್ಷಗಳಿಗೆ ತೀಕ್ಷ್ಣ ಪ್ರತಿಕ್ರಿಯೆಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾ ಸಕ್ರಿಯರಾಗಿ ಇರುತ್ತಾರೆ. ಇಂದೂ ಕೂಡ ಕೆಲವು ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.