ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಂ ಜಿಲ್ಲೆಯ ಕಾಜಿಗುಂಡ್ನ ವೈಕೆ ಪೋರಾ ಪ್ರದೇಶದಲ್ಲಿ ಸಂಜೆ ಮೂವರು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ, ಕುಲ್ಗಂ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಫಿಡಾ ಹುಸೇನ್ ಇಟೂ, ಉಮರ್ ಹಜ್ಜಮ್ ಮತ್ತು ವಸೀಮ್ ಅಹ್ಮದ್ ಮೃತಪಟ್ಟಿದ್ದಾರೆ.
ವರದಿಗಳ ಪ್ರಕಾರ, ವೈಕೆ ಪೋರಾದಲ್ಲಿ ಮೂವರು ವ್ಯಕ್ತಿಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಹುಸೇನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇತರ ಇಬ್ಬರನ್ನು ಖಾಜಿಗುಂಡ್ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಅವರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.