ಮೋತಿಹಾರಿ(ಬಿಹಾರ): ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿ ಐವರು ಗಂಭಿರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಿಹಾರದ ಮೋತಿಹಾರಿ ನಗರದ ಸುಗೌಲಿಯಲ್ಲಿರುವ ಸರ್ಕಾರೇತರ ಸಂಸ್ಥೆಯೊಂದರ ಅಡುಗೆ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ಇಲ್ಲಿನ ಸ್ಥಳೀಯ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.