ನವದೆಹಲಿ: ಇತರೆ ಸಮುದಾಯಗಳಿಗೆ ಹೋಲಿಕೆ ಮಾಡಿದಾಗ ಬ್ರಾಹ್ಮಣರು ಹುಟ್ಟಿನಿಂದಲೇ ಎಲ್ಲರಿಗಿಂತ ಶ್ರೇಷ್ಠರು ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದು, ಇದೀಗ ವಿವಾದದ ಸ್ವರೂಪ ಪಡೆದುಕೊಂಡಿದೆ.
ಕೋಟಾದಲ್ಲಿ ನಡೆದ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾದ ಸಮಾವೇಶದಲ್ಲಿ ಭಾಗಿಯಾಗಿ ಅವರು ಈ ಹೇಳಿಕೆ ನೀಡಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಕುಟುಂಬ ಹಳ್ಳಿ ಅಥವಾ ಗುಡಿಸಲಿನಲ್ಲಿ ವಾಸ ಮಾಡಿದರೂ ಸಮಾಜದಲ್ಲಿ ಹೆಚ್ಚಿನ ಗೌರವ, ಉನ್ನತ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
-
समाज में ब्राह्मणों का हमेशा से उच्च स्थान रहा है। यह स्थान उनकी त्याग, तपस्या का परिणाम है। यही वजह है कि ब्राह्मण समाज हमेशा से मार्गदर्शक की भूमिका में रहा है। pic.twitter.com/ZKcMYhhBt8
— Om Birla (@ombirlakota) September 8, 2019 " class="align-text-top noRightClick twitterSection" data="
">समाज में ब्राह्मणों का हमेशा से उच्च स्थान रहा है। यह स्थान उनकी त्याग, तपस्या का परिणाम है। यही वजह है कि ब्राह्मण समाज हमेशा से मार्गदर्शक की भूमिका में रहा है। pic.twitter.com/ZKcMYhhBt8
— Om Birla (@ombirlakota) September 8, 2019समाज में ब्राह्मणों का हमेशा से उच्च स्थान रहा है। यह स्थान उनकी त्याग, तपस्या का परिणाम है। यही वजह है कि ब्राह्मण समाज हमेशा से मार्गदर्शक की भूमिका में रहा है। pic.twitter.com/ZKcMYhhBt8
— Om Birla (@ombirlakota) September 8, 2019
ಸಮರ್ಪಣೆ, ತ್ಯಾಗ ಹಾಗೂ ಮಾರ್ಗದರ್ಶನದಲ್ಲಿ ಅವರು ಇತರರಿಗಿಂತಲೂ ಒಂದು ಹೆಜ್ಜೆ ಮುಂದೆ ಎಂದಿರುವ ಬಿರ್ಲಾ, ಪ್ರತಿಯೊಂದು ವಿಷಯದಲ್ಲೂ ಅವರು ಇತರರಿಗೆ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದಿದ್ದಾರೆ. ಸಮಾಜದಲ್ಲಿ ಶಿಕ್ಷಣ, ಮೌಲ್ಯಗಳನ್ನ ಬಿತ್ತರಿಸುವಲ್ಲೂ ಕೂಡ ಅವರ ಪಾತ್ರ ಪ್ರಮುಖವಾಗಿದ್ದು, ಹೀಗಾಗಿ ಅವರಿಗೆ ಹೆಚ್ಚಿನ ಗೌರವ ನೀಡಲಾಗುತ್ತದೆ ಎಂದಿದ್ದಾರೆ.
ಇವರ ಹೇಳಿಕೆಗೆ ವಿವಿಧ ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ತಮ್ಮ ಹೇಳಿಕೆ ಹಿಂಪಡೆದುಕೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.