ಚಂಡೀಗಢ(ಪಂಜಾಬ್): ಮೊಹಾಲಿ ಬಳಿ ಮೂರು ಅಂತಸ್ತಿನ ಕಟ್ಟಡ ನೆಲಕ್ಕುರುಳಿದ್ದು ಅವಶೇಷಗಳಯಲ್ಲಿ ಹಲವರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಹಾಲಿಯ ಖರಾರ್-ಲ್ಯಾಂಡ್ರಾನ್ ರಸ್ತೆಯಲ್ಲಿರುವ ಕಟ್ಟಡದ ತಳಪಾಯ ಬಳಿ ಜೆಸಿಬಿ ಕೆಲಸ ಮಾಡುತ್ತಿತ್ತು. ಈ ವೇಳೆ ಕಟ್ಟಡ ಕುಸಿದಿದೆ ಎಂಂಬ ಮಾಹಿತಿ ದೊರೆತಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚಾರಣೆಯಲ್ಲಿ ತೊಡಗಿರುವ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿ ಈಗಾಗಲೇ ಇಬ್ಬರನ್ನು ರಕ್ಷಿಸಿದ್ದಾರೆ. ಸುಮಾರು ಆರರಿಂದ ಏಳು ಜನ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಡಿಆರ್ಎಫ್ ತಂಡ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.