ETV Bharat / bharat

ಕೇಂದ್ರ ಸರ್ಕಾರದ 16 ಜಂಟಿ ಕಾರ್ಯದರ್ಶಿಗಳ ಹುದ್ದೆಗಳ ಸ್ಥಾನ ಬದಲಾವಣೆ

ಕೇಂದ್ರ ಅಧಿಕಾರಿಗಳ ಹುದ್ದೆಗಳ ಪುನರ್​ ರಚನೆಯಲ್ಲಿ ಕೇಂದ್ರ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ 16 ಜಂಟಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.

government
government
author img

By

Published : May 30, 2020, 4:10 PM IST

ನವದೆಹಲಿ: ಅಧಿಕಾರಿಗಳ ಹುದ್ದೆಗಳ ಪುನರ್ ​ರಚನೆಯಲ್ಲಿ ಕೇಂದ್ರ ಸರ್ಕಾರ ತನ್ನ ವಿವಿಧ ಇಲಾಖೆಗಳಿಗೆ 16 ಜಂಟಿ ಕಾರ್ಯದರ್ಶಿಗಳನ್ನು ನೇಮಿಸಿದೆ.

ಹಿರಿಯ ಅಧಿಕಾರಿ ಅರುಣ್ ಸಿಂಘಾಲ್ ಅವರನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ. ಉತ್ತರ ಪ್ರದೇಶದ ಕೇಡರ್​ನ 1987ರ ಬ್ಯಾಚ್​ನ ಐಎಎಸ್ ಅಧಿಕಾರಿ ಸಿಂಘಾಲ್ ಅವರು ಪ್ರಸ್ತುತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಶೇಷ ಕಾರ್ಯದರ್ಶಿಯಾಗಿದ್ದಾರೆ.

1991ರ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿ ಎಸ್. ಗೋಪಾಲಕೃಷ್ಣನ್ ಅವರನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ, ಅವರು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ನಿಯೋಜನೆ ಆಗಿದ್ದರು.

ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) ಮಹಾನಿರ್ದೇಶಕರಾಗಿ ಇತ್ತೀಚೆಗೆ ನೇಮಕಗೊಂಡಿದ್ದ ರಾಜೇಂದ್ರ ಕುಮಾರ್ ಅವರು ಈಗ ಗೋಪಾಲಕೃಷ್ಣನ್ ಅವರಿಂದ ತೆರವಾದ ಐಟಿ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಆಗಲಿದ್ದಾರೆ ಎಂದು ಸಿಬ್ಬಂದಿ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

ಮುಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್​ನಲ್ಲಿ (ಎಲ್​ಬಿಎಸ್ಎನ್ಎಎ) ಪ್ರಸ್ತುತ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಹಾರ ಕೇಡರ್ ಐಎಎಸ್ ಅಧಿಕಾರಿ ಸಿ.ಶ್ರೀಧರ್ ಅವರನ್ನು ಪಿಎಂಒನಲ್ಲಿ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಕ್ಯಾಬಿನೆಟ್ ಸಚಿವಾಲಯದ ನಿರ್ದೇಶಕಿ ಮೀರಾ ಮೊಹಂತಿ ಅವರನ್ನು ಅದೇ ಹುದ್ದೆಯಲ್ಲಿ ಪಿಎಂಒಗೆ ಸ್ಥಳಾಂತರಿಸಲಾಗಿದೆ.

ಸಿಬ್ಬಂದಿ ಮತ್ತು ತರಬೇತಿ ವಿಭಾಗದ ಉಪ ಕಾರ್ಯದರ್ಶಿ ಸ್ಮಿತಾ ಸಾರಂಗಿ ಅವರನ್ನು ಅದೇ ಹುದ್ದೆಯಲ್ಲಿ ಕ್ಯಾಬಿನೆಟ್ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

ಹೆಚ್ಚುವರಿ ಹಣಕಾಸು ಸಲಹೆಗಾರ ಮತ್ತು ರಕ್ಷಣಾ ಸಚಿವಾಲಯದ (ಹಣಕಾಸು) ಜಂಟಿ ಕಾರ್ಯದರ್ಶಿ ಸುಬೀರ್ ಮಲ್ಲಿಕ್ ಹೆಚ್ಚುವರಿ ಇಲಾಖೆಯ ಮಟ್ಟದಲ್ಲಿ ಅದೇ ಇಲಾಖೆಯಲ್ಲಿ ಮುಂದುವರಿಯಲಿದ್ದಾರೆ.

ಮನೀಶ್ ತಿವಾರಿ ಅವರನ್ನು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅಲಕಾನಂದ ದಯಾಳ್ ಅವರನ್ನು ಕೃಷಿ ಇಲಾಖೆ, ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಪಲ್ಲವಿ ಅಗರ್ವಾಲ್ ಅವರನ್ನು ಸಂಸ್ಕೃತಿ ಸಚಿವಾಲಯದ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸುರೇಂದ್ರ ಪ್ರಸಾದ್ ಯಾದವ್ ರಕ್ಷಣಾ ಉತ್ಪಾದನಾ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಲಿದ್ದಾರೆ.

ಹಿರಿಯ ಅಧಿಕಾರಿ ಘನಶ್ಯಾಮ ಪ್ರಸಾದ್ ಅವರು ವಿದ್ಯುತ್ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮತ್ತು ಹಿಮಾಬಿಂದು ಮುದುಂಬೈ ಕಂದಾಯ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿ. ರಾಧಾ ಮತ್ತು ಯತೀಶ್ ಕುಮಾರ್ ಸಿಂಗ್ ಅವರನ್ನು ಕ್ರಮವಾಗಿ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಸದಸ್ಯರಾಗಿ ವಿಜಯ್ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿದೆ.

ಅನುಪಮ್ ಮಿಶ್ರಾ ಅವರು ಅಭಿವೃದ್ಧಿ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಕಚೇರಿ (ಡಿಎಂಇಒ), ನೀತಿ ಆಯೋಗದ ಜಂಟಿ ಕಾರ್ಯದರ್ಶಿಯಾಗಲಿದ್ದಾರೆ. ವಿನೋದ್ ಕೊತ್ವಾಲ್ ಅವರು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ (ಎನ್‌ಪಿಪಿಎ) ರಾಷ್ಟ್ರೀಯ ಕಾರ್ಯದರ್ಶಿಯಾಗಲಿದ್ದಾರೆ. ವಿಪಿನ್ ಕುಮಾರ್ಹಾಸ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಸುನೀಲ್ ಕುಮಾರ್ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಮತ್ತು ಆರ್.ಜಯ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮತ್ತು ರೂಪ್ ರಾಶಿಯನ್ನು ಜವಳಿ ಸಚಿವಾಲಯದ ಅಡಿಯಲ್ಲಿ ಮುಂಬಲ್‌ನ ಜವಳಿ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.