ಲಕ್ನೋ (ಉತ್ತರ ಪ್ರದೇಶ): ಬಸ್ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶಕ್ಕೆ ಮರಳಿ ಸಾಗಿಸಲು ಬಸ್‌ಗಳಿಗೆ ಸುಳ್ಳು ದಾಖಲೆಗಳನ್ನು ಒದಗಿಸಿದ ಆರೋಪದಡಿ ಅಜಯ್ ಕುಮಾರ್ ಲಲ್ಲು ಅವರನ್ನು ಮೇ 20ರಂದು ಬಂಧಿಸಲಾಗಿದೆ.
ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ದಾಖಲೆಗಳು ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ವಿಚಾರಣೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.