ಜಲ್ಪೈಗುರಿ (ಪಶ್ಚಿಮ ಬಂಗಾಳ) : ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಪಿಯಾದ ಪರಿಣಾಮ 32 ಜನ ಗಾಯಗೊಂಡಿರುವ ಘಟನೆ ಜಿಲ್ಲೆಯ ಧುಪ್ಗುರಿ ಬ್ಲಾಕ್‌ನಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಸಾಹುಡಂಗಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರು ಕೂಚ್ ಬೆಹರ್ ಜಿಲ್ಲೆಯ ತಮ್ಮ ಮನೆಗೆ ತೆರಳುತ್ತಿದ್ದಾಗ ಈ ದುರ್ಘನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಮೂವರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಜಲ್ಪೈಗುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಧುಪ್ಗುರಿ ಪೊಲೀಸರು ಕಾರ್ಮಿಕರನ್ನು ರಕ್ಷಿಸಿದ್ದಾರೆ.