ಗುಂಟೂರು: ಬೆಂಗಳೂರಿನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಯಡ್ಲಪಾಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ಬೆಂಗಳೂರಿನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಗುದ್ದಿದೆ. ಬಳಿಕ ಬಸ್ ಪಲ್ಟಿಯಾಗಿ ರಸ್ತೆಗೆ ಉರುಳಿ ಬಿದ್ದಿದೆ. ಪರಿಣಾಮ ಏಳು ಜನ ಗಂಭೀರವಾಗಿ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.