ನವದೆಹಲಿ: ಬಸ್ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ನೀತಿ ಆಯೋಗದ ಕಚೇರಿಗೆ ನುಗ್ಗಿರುವ ಘಟನೆ ನಗರದಲ್ಲಿ ನಡೆದಿದೆ.
ತಡರಾತ್ರಿ ಬಸ್ ನಿಯಂತ್ರಣ ತಪ್ಪಿ ನೀತಿ ಆಯೋಗ ಕಚೇರಿಯ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾಂಪೌಂಡ್ ಕುಸಿದು ಬಿದ್ದಿದೆ.
ಈ ಅಪಘಾತದಲ್ಲಿ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.