ರೇವಾ: ಇಂದು ಬೆಳ್ಳಂಬೆಳಗ್ಗೆ 6 ಗಂಟೆಗೆ ರೇವಾದಲ್ಲಿ ಯಮರಾಜ ಅಟ್ಟಹಾಸ ಮೆರೆದಿದ್ದಾನೆ. ನಿದ್ರೆ ಜಾರಿದ ಕೆಲವರು ಚಿರ ನಿದ್ರೆಗೆ ಜಾರಿದ್ದಾರೆ.
ಹೌದು, ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಹಿಂಬದಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಬಸ್ನಲ್ಲಿ ಸುಮಾರು 60 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಇಂದು ಬೆಳಗ್ಗೆ ಆರು ಗಂಟೆಗೆ ರೇವಾದಲ್ಲಿ ಅಪಘಾತದ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು, ಇನ್ನು ಅನೇಕ ಪ್ರಯಾಣಿಕರು ಬಸ್ನಲ್ಲೇ ಸಿಲುಕಿಕೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳದಕ್ಕೆ ದೌಡಾಯಿಸಿ ಸ್ಥಳೀಯರ ನೆರವಿನಿಂದ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸ್ಥಳೀಯರ ಪ್ರಕಾರ, ಬಸ್ ವೇಗವಾಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳ್ತಿದ್ದಾರೆ.
ಈ ಘಟನೆ ಕುರಿತು ರೇವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.