ಹೈದರಾಬಾದ್: ಬಿಹಾರದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಜೊತೆ ಮಧ್ಯಪ್ರದೇಶ, ಕರ್ನಾಟಕ, ಒಡಿಶಾ, ಉತ್ತರಪ್ರದೇಶ ಸೇರಿದಂತೆ ದೇಶದ 10ಕ್ಕೂ ಹೆಚ್ಚು ರಾಜ್ಯಗಳ 56 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದೆ.
ಉತ್ತರಪ್ರದೇಶದಲ್ಲಿ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 4, ಎಸ್ಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಗುಜರಾತ್‌ನ 8 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಣಿಪುರದಲ್ಲಿ 1 ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳ ಫಲಿತಾಂಶವು ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ. 28 ಕ್ಷೇತ್ರಗಳ ಪೈಕಿ 17 ಕ್ಷೇತ್ರದಲ್ಲಿ ಬಿಜೆಪಿ, 7 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ.