ನವದೆಹಲಿ: ಕೇಂದ್ರ ಸರ್ಕಾರದ ಒಡೆದು ಆಳುವ ನೀತಿಯನ್ನು ವಿರೋಧಿಸುತ್ತೇವೆ. ಇಲ್ಲಿ ಬದುಕಲು ಇಷ್ಟಪಡುವ ಜನರಲ್ಲಿ ಪೌರತ್ವದ ದಾಖಲೆಗಳನ್ನು ಕೇಳುವ ಹಕ್ಕು ಯಾರಿಗೂ ಇಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬಿಜೆಪಿ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ.
ಶಹೀನ್ ಭಾಗ್ನಲ್ಲಿ ಕಳೆದೊಂದು ತಿಂಗಳಿನಿಂದ ಎನ್ಆರ್ಸಿ, ಸಿಎಎ, ಎನ್ಪಿಆರ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಾಗೂ ಜಾರಿಗೊಳಿಸುತ್ತಿರುವ ಕಾಯ್ದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ವಾಗ್ದಾಳಿ ನಡೆಸಿದರು.