ನವದೆಹಲಿ: ಜಗತ್ತಿನಾದ್ಯಂತ ವ್ಯಾಪಾರ ವಹಿವಾಟು ವಿಸ್ತರಿಸುತ್ತಿರುವ ಭಾರತ, ಇದೀಗ ಎಸ್ಟೋನಿಯಾ, ಪರಾಗ್ವೆ ಹಾಗೂ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಇಂಡಿಯನ್ ಮಿಷನ್ ಆರಂಭಿಸಲು ಮುಂದಾಗಿದೆ. ಇದಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ.
ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಎಸ್ಟೋನಿಯಾ, ಪರಾಗ್ವೆ ಹಾಗೂ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಇಂಡಿಯನ್ ಮಿಷನ್‌ಗೆ ಇಂದಿನ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಈ ದೇಶಗಳಲ್ಲಿ ವ್ಯಾಪಾರ ಉತ್ತೇಜನ, ಸಾಂಸ್ಕೃತಿಕ ಸಂಬಂಧ ವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್ಗೆ ಕೇಂದ್ರದ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ಎಲ್ಲಾ ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತಾರೆ. ಇತರೆ ರಾಷ್ಟ್ರಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದರು.