ಮುಜಫರ್ನಗರ(ಉತ್ತರ ಪ್ರದೇಶ): ಹದಗೆಟ್ಟ ರಸ್ತೆಯಲ್ಲಿ ಸಂಭವಿಸಿದ ಅಪಘಾತದಿಂದ ಬೈಕ್ ಸವಾರ ಮೃತಪಟ್ಟಿದ್ದು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಇಬ್ಬರು ಸಹೋದರರು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾನೆ. ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಸ್ತೆಯಲ್ಲಿ ಹಲವು ಗುಂಡಿಗಳಿದ್ದು, ದುರಸ್ತಿ ಮಾಡದ ಕಾರಣ ಅಪಘಾತ ಸಂಭವಿಸಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ದೂರಿನ ಮೇರೆಗೆ ರಸ್ತೆ ದುರಸ್ತಿ ಮಾಡದಿದ್ದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.