ಲಖನೌ: ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದಡಿ ಅಮಾನುತುಗೊಂಡ ಪೊಲೀಸ್ ಅಧಿಕಾರಿ ಮೇಲೆ ಇದೀಗ ದೂರು ದಾಖಲಾಗಿದೆ.
ಉತ್ತರ ಪ್ರದೇಶದ ಇಟವಾ ನಗರದಲ್ಲಿ ಅಮಾನತುಗೊಂಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ಅಜಯ್ ಠಾಕ್ರೆ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಭಾವು ಈ ದೂರು ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂ ದೇವತೆಗಳ ವಿರುದ್ಧ ಮತ್ತು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕರ್ತವ್ಯದಲ್ಲಿದ್ದಾಗ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿಯೂ ಅವರು ಭಾಗಿಯಾಗಿದ್ದರು. ಅಲ್ಲದೇ ದೇವಾಲಯದಲ್ಲಿ ವಿಗ್ರಹವನ್ನು ಒಡೆದ ಆರೋಪವೂ ಇವರ ಮೇಲಿತ್ತು. ಹಾಗಾಗಿ ಕರ್ತವ್ಯದಲಿದ್ದ ಓರ್ವ ಪೊಲೀಸ್ ಅಧಿಕಾರಿ ಇಂತಹ ಕೃತ್ಯದಲ್ಲಿ ಪಾಲ್ಗೊಳ್ಳುವುದು ಹಾಗೂ ಕೃತ್ಯ ಎಸಗುವುದು ತಪ್ಪು. ಈ ಹಿನ್ನೆಲೆಯಲ್ಲಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು ಎಂದು ಹಿರಿಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಪೊಲೀಸ್ ಅಧಿಕಾರಿ ವಿರುದ್ಧ ಪೊಲೀಸರು ತನಿಖೆ ನಡೆಸಿದ್ದಾರೆ.