ನವದೆಹಲಿ: ಉತ್ತರ ಪ್ರದೇಶ ಹಥ್ರಾಸ್ ಸಂತ್ರಸ್ತೆ ಕುಟುಂಬವನ್ನ ಭೇಟಿ ಮಾಡಲು ಯತ್ನಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 200 ಜನರ ವಿರುದ್ಧ ಗೌತಮ್ ಬುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೆಕ್ಷನ್ 188, 269 ಮತ್ತು 270 ಅಡಿ ಹಾಗೂ ಎಪಿಡೆಮಿಕ್ ಆ್ಯಕ್ಟ್ ಅಡಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು 200 ಜನರ ವಿರುದ್ಧ ದೂರು ದಾಖಲಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಹಥ್ರಾಸ್ ಸಂತ್ರಸ್ತೆ ಕುಟುಂಬವನ್ನ ಭೇಟಿ ಮಾಡಲು ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು.