ನವದೆಹಲಿ: ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೆರಿಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಮಿಳುನಾಡಿಗೆ ಸಂಬಂಧಿಸಿದಂತೆ, ತಂಜಾವೂರಿನ ಕೆಳ ಕಾವೇರಿ ನೀರಾವರಿ ವಲಯದ ಅಧೀಕ್ಷಕ ಎಂಜಿನಿಯರ್ ಅನ್ಬರಸನ್, ಕಾವೇರಿ ತಾಂತ್ರಿಕ ಸಮಿತಿಯ ಅಧ್ಯಕ್ಷ ಸುಬ್ರಮಣಿಯನ್ ಮತ್ತು ಸದಸ್ಯ ಪಟ್ಟಾಬಿರಾಮನ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಾರಿಮುತ್ತು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಭಾಗವಹಿದ್ದ ಎಲ್ಲ ರಾಜ್ಯಗಳ ಪ್ರತಿನಿಧಿಗಳು ಕಾವೇರಿ ನದಿಯ ನೀರು ಹಂಚಿಕೆಯ ಬಗ್ಗೆ ತಮ್ಮ ಅಂಕಿಅಂಶಗಳ ವರದಿಗಳನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ನಡುವಿನ ವಿವಾದ ಇನ್ನೂ ಮುಂದುವರೆದಿದೆ ಎಂದು ಸಭೆಯಲ್ಲಿ ಗಮನಿಸಲಾಯಿತು.
ಮೇಕೆದಾಟು ಯೋಜನೆಗಾಗಿ ಸಮೀಕ್ಷೆ ನಡೆಸಲು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ಕರ್ನಾಟಕಕ್ಕೆ ಅನುಮತಿ ನೀಡಿತ್ತು. ಆದರೆ ತಮಿಳುನಾಡು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ, ಮೇಕೆದಾಟು ಅಣೆಕಟ್ಟು ನಿರ್ಮಿಸುವ ಯೋಜನೆಗೆ ಅವಕಾಶ ನೀಡಬಾರದು ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದರು.
ಆದರೆ, ಕರ್ನಾಟಕವು ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ ನಿರ್ಮಿಸುವ ಕುರಿತು ದೃಢ ನಿರ್ಧಾರ ಹೊಂದಿದೆ. ಕಾವೇರಿ ನದಿಯುದ್ದಕ್ಕೂ ಚೆಕ್ ಡ್ಯಾಂ ನಿರ್ಮಿಸುವ ಕರ್ನಾಟಕ ಸರ್ಕಾರದ ಪ್ರಯತ್ನದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ಬಾಕಿ ಇದೆ.