ನವದೆಹಲಿ : ಸಾಮಾಜಿಕ ಜಾಲತಾಣದ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಾಮಗ್ರಿಗಳನ್ನು ಮಾರಾಟ ಮತ್ತು ಖರೀದಿ ಮಾಡುತ್ತಿದ್ದ ಇಬ್ಬರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.
ಇಬ್ಬರು ಆರೋಪಿಗಳನ್ನು ಇಲ್ಲಿನ ಸಾಕತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜನವರಿ 22ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿ ಕೋರ್ಟ್ ಆದೇಶ ನೀಡಿದೆ.
ಇದನ್ನು ಓದಿ: ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಹೆಚ್.ಡಿ.ಕುಮಾರಸ್ವಾಮಿ!
ಮಕ್ಕಳ ಅಶ್ಲೀಲ ವಸ್ತುಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳ ಬಗ್ಗೆ ಇನ್‌ಸ್ಟಾಗ್ರಾಂ ಮೂಲಕ ಜಾಹೀರಾತು ನೀಡಿದ್ದರು ಎಂಬ ಆರೋಪ ಇವರ ಮೇಲಿದ್ದು, ಪೋಕ್ಸೊ ಕಾಯ್ದೆ 2012ರ ಸೆಕ್ಷನ್ 14ರ ಅಡಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 67-ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನೊಬ್ಬ ಆರೋಪಿಯು ಅಶ್ಲೀಲ ವಸ್ತುಗಳನ್ನು ಖರೀದಿಸಿದ್ದಾನೆ ಎಂಬ ಆರೋಪದಲ್ಲಿ ಬಂಧಿಸಲಾಗಿದೆ.
ವಾಟ್ಸ್ಆ್ಯಪ್, ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಮತ್ತು ಇತರ ಸಾಮಾಜಿಕ ಜಾಲತಾಣಗಳ ಮೂಲಕವೂ ಈ ರೀತಿಯ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು, 2019ರಿಂದ ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.