ನವದೆಹಲಿ: ಮಾರ್ಚ್ 19 ರಿಂದ 31ರವರೆಗೆ ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಪರೀಕ್ಷೆಗಳು ಕೋವಿಡ್-19 ಕಾರಣದಿಂದ ಮುಂದೂಡಲ್ಪಟ್ಟಿದ್ದು, ಲಾಕ್ಡೌನ್ ಮುಗಿಯುತ್ತಿದ್ದಂತೆ ಪರೀಕ್ಷೆ ನಡೆಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮಾಹಿತಿ ನೀಡಿದೆ.
10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ನಡೆಸಲಾಗಿದ್ದ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುವುದು ಎಂಬ ವದಂತಿ ಎಲ್ಲೆಡೆ ಹಬ್ಬುತ್ತಿದ್ದಂತೆ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ.
-
Recently there has been a lot of speculation regarding 10th CBSE Board exams. It is reiterated that the boards decision to take board exams for 29 subjects of class 10 and 12, stands the same as mentioned in circular dated 1.4.20.@DrRPNishank @PMOIndia @PTI_News
— CBSE HQ (@cbseindia29) April 29, 2020 " class="align-text-top noRightClick twitterSection" data="
">Recently there has been a lot of speculation regarding 10th CBSE Board exams. It is reiterated that the boards decision to take board exams for 29 subjects of class 10 and 12, stands the same as mentioned in circular dated 1.4.20.@DrRPNishank @PMOIndia @PTI_News
— CBSE HQ (@cbseindia29) April 29, 2020Recently there has been a lot of speculation regarding 10th CBSE Board exams. It is reiterated that the boards decision to take board exams for 29 subjects of class 10 and 12, stands the same as mentioned in circular dated 1.4.20.@DrRPNishank @PMOIndia @PTI_News
— CBSE HQ (@cbseindia29) April 29, 2020
ಸಿಬಿಎಸ್ಇ 29 ವಿಷಯಗಳ ಪರೀಕ್ಷೆ ನಡೆಸಬೇಕಾಗಿದ್ದು, ಲಾಕ್ಡೌನ್ ಮುಗಿಯುತ್ತಿದ್ದಂತೆ ಇವುಗಳನ್ನ ನಡೆಸಲು ನಿರ್ಧರಿಸಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್, ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಎಲ್ಲ ರಾಜ್ಯದ ಶಿಕ್ಷಣ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಈ ವೇಳೆ, ಕೆಲವೊಂದು ಮಹತ್ವದ ವಿಚಾರ ಹಂಚಿಕೊಂಡಿದ್ದಾರೆ. ಲಾಕ್ಡೌನ್ ಮುಗಿದ ತಕ್ಷಣವೇ ಪರೀಕ್ಷೆ ನಡೆಸುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.