ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುಯತ್ತಿರುವ ರೈಸಿನಾ ಸಂವಾದದ 5 ನೇ ಆವೃತ್ತಿಯಲ್ಲಿ ಮಾತನಾಡಿದ ಭಾರತದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ (CDS) ಬಿಪಿನ್ ರಾವತ್, ಪಾಕಿಸ್ತಾನದ ಭಯೋತ್ಪಾದನಾ ಪ್ರಾಯೋಜಕತ್ವದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನಾ ಕೃತ್ಯಗಳನ್ನು ಪಾಕಿಸ್ತಾನ ಮುಂದುವರೆಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡುವ ಅಗತ್ಯತೆಯಿದೆ. ಅಲ್ಲದೇ ಗಡಿಯಾಚೆಗಿನ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗುವ ರಾಜ್ಯಗಳ ವಿರುದ್ಧ ಜಗತ್ತಿನ ಎಲ್ಲಾ ರಾಷ್ಟ್ರಗಳು ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು.
ಇನ್ನು ಅಫ್ಘಾನಿಸ್ತಾನದಲ್ಲಿ ಯುಎಸ್ ಮತ್ತು ತಾಲಿಬಾನ್ ನಡುವಿನ ಶಾಂತಿ ಒಪ್ಪಂದಕ್ಕೆ ಬೆಂಬಲ ಸೂಚಿಸಿರುವ ರಾವತ್, ಶಾಂತಿ ಮಾತುಕತೆಗೂ ಮೊದಲು ತಾಲಿಬಾನ್ ಶಸ್ತ್ರಾಸ್ತ್ರಗಳನ್ನು ತ್ಯಜಿಸಬೇಕು ಎಂದು ಹೇಳಿದರು.