ETV Bharat / bharat

ಅಯೋಧ್ಯೆ ತೀರ್ಪು ಹಿನ್ನೆಲೆ: ಎಚ್ಚರಿಕೆಯಿಂದಿರುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ - Ayodhya verdict latest news

ಇದೇ ನವೆಂಬರ್​ 17ರ ಒಳಗಾಗಿ ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಭೂವಿವಾದ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಹೊರಬೀಳುವ ಸಾಧ್ಯತೆಯಿದೆ. ಇದು ತೀರಾ ಸೂಕ್ಷ್ಮ ವಿಚಾರವಾಗಿದ್ದು, ಹೀಗಾಗಿ ಪ್ರತಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆ ಸೂಚನೆ ನೀಡಿದೆ.

ಅಯೋಧ್ಯೆ ತೀರ್ಪು
author img

By

Published : Nov 8, 2019, 6:43 AM IST

ನವದೆಹಲಿ: ಅಯೋಧ್ಯೆ ಭೂವಿವಾದ ಕುರಿತ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.

ಇದೇ ನವೆಂಬರ್​ 17ರ ಒಳಗಾಗಿ ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಹೊರಬೀಳುವ ಸಾಧ್ಯತೆಯಿದೆ. ಇದು ತೀರಾ ಸೂಕ್ಷ್ಮ ವಿಚಾರವಾಗಿದ್ದು, ಹೀಗಾಗಿ ಪ್ರತಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆ ಸೂಚನೆ ನೀಡಿದೆ.

ಉತ್ತರಪ್ರದೇಶದಲ್ಲಿ ಅದರಲ್ಲೂ ವಿಶೇಷವಾಗಿ ಅಯೋಧ್ಯೆಯಲ್ಲಿ ಭದ್ರತೆಗಾಗಿ ಸುಮಾರು 4,000 ಅರೆಸೈನಿಕ ಸಿಬ್ಬಂದಿಯನ್ನು ಗೃಹ ಸಚಿವಾಲಯ ರವಾನಿಸಿದೆ.

ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಮತ್ತು ದೇಶದಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದು ಗೃಹ ಸಚಿವಾಲಯ ಮೂಲಗಳು ತಿಳಿಸಿದೆ.

Intro:Body:

Centre asks states to remain alert

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.