ನವದೆಹಲಿ: ರೈತ ನಾಯಕರೊಂದಿಗೆ ಶನಿವಾರ ನಡೆದ ಐದನೇ ಸುತ್ತಿನ ಮಾತುಕತೆ ವಿಫಲವಾಗಿದ್ದು, ಕೇಂದ್ರವು ಡಿಸೆಂಬರ್ 9 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಘೋಷಿಸಿದೆ.
ವಿಜ್ಞಾನ ಭವನದಲ್ಲಿ ನಡೆದ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧವಾಗಿದೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯು ಮುಂದುವರಿಯುತ್ತದೆ ಮತ್ತು ಇದಕ್ಕೆ ಯಾವುದೇ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.
-
We have said that the MSP will continue, there is no threat to it. It is baseless to doubt this. Still, if someone is suspicious then the government is ready to resolve it: Agriculture Minister Narendra Singh Tomar #FarmLaws pic.twitter.com/MLIQ7bLwUQ
— ANI (@ANI) December 5, 2020 " class="align-text-top noRightClick twitterSection" data="
">We have said that the MSP will continue, there is no threat to it. It is baseless to doubt this. Still, if someone is suspicious then the government is ready to resolve it: Agriculture Minister Narendra Singh Tomar #FarmLaws pic.twitter.com/MLIQ7bLwUQ
— ANI (@ANI) December 5, 2020We have said that the MSP will continue, there is no threat to it. It is baseless to doubt this. Still, if someone is suspicious then the government is ready to resolve it: Agriculture Minister Narendra Singh Tomar #FarmLaws pic.twitter.com/MLIQ7bLwUQ
— ANI (@ANI) December 5, 2020
"ರಾಜ್ಯಗಳಲ್ಲಿನ ಮಂಡಿಯ ಮೇಲೆ ಪರಿಣಾಮ ಬೀರುವ ಉದ್ದೇಶ ನಮಗಿಲ್ಲ, ಅವು ಕಾನೂನಿನಿಂದ ಪ್ರಭಾವಿತವಾಗುವುದಿಲ್ಲ. ಎಪಿಎಂಸಿಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಸಿದ್ಧವಾಗಿದೆ. ಎಪಿಎಂಸಿಗಳ ಬಗ್ಗೆ ಯಾರಿಗಾದರೂ ತಪ್ಪು ಕಲ್ಪನೆ ಇದ್ದರೆ, ಅದನ್ನು ಸ್ಪಷ್ಟಪಡಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ" ಎಂದಿದ್ದಾರೆ.
"ನಾವು ಕೆಲವು ಸಲಹೆಗಳನ್ನು ಪಡೆಯಲು ಬಯಸಿದ್ದೆವು ಆದರೆ ಮಾತುಕತೆಯ ಸಮಯದಲ್ಲಿ ಅದು ಆಗಲಿಲ್ಲ. ಎಲ್ಲ ಬೇಡಿಕೆಗಳನ್ನು ಸರ್ಕಾರ ಪರಿಗಣಿಸುತ್ತದೆ ಎಂದು ನಾವು ರೈತರಿಗೆ ತಿಳಿಸಿದ್ದೇವೆ. ರೈತ ಮುಖಂಡರಿಂದ ಸಲಹೆಗಳನ್ನು ಪಡೆದಿದ್ದರೆ ಪರಿಹಾರವನ್ನು ಕಂಡುಕೊಳ್ಳುವುದು ನಮಗೆ ಸುಲಭವಾಗುತ್ತಿತ್ತು. ಡಿಸೆಂಬರ್ 9 ರಂದು ಮತ್ತೊಂದು ಸಭೆ ನಡೆಯಲಿದೆ. ರೈತರಿಗೆ ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆ ನೀಡಿದ್ದೇವೆ. ತೀವ್ರ ಚಳಿ ಮತ್ತು ಕೋವಿಡ್ -19 ಭೀತಿಯಿಂದಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳನ್ನು ಪ್ರತಿಭಟನಾ ಸ್ಥಳಗಳಿಂದ ಮನೆಗೆ ಕಳುಹಿಸುವಂತೆ ರೈತ ಸಂಘದ ಮುಖಂಡರಿಗೆ ಮನವಿ ಮಾಡಿದ್ದೇನೆ" ಎಂದಿದ್ದಾರೆ.