ನವದೆಹಲಿ: ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಅತ್ಯಂತ ಕ್ಲಿಷ್ಟಕರ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಇನ್ನೇನಿದ್ದರೂ ಚಂದ್ರನ ಮೇಲೆ ಇಳಿಯುವುದೊಂದೇ ಬಾಕಿ..!
ಲ್ಯಾಂಡರ್ ವಿಕ್ರಮ್ ಹಾಗೂ ರೋವರ್ ಪ್ರಜ್ಞಾನ್ ಮುಖ್ಯ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟಿದ್ದು, ಇಂದು ಮಧ್ಯಾಹ್ನ 1.15ರ ವೇಳೆಗೆ ಈ ಕಾರ್ಯವನ್ನು ಇಸ್ರೋ ವಿಜ್ಞಾನಿಗಳು ಸಫಲವಾಗಿ ನಡೆಸಿದ್ದಾರೆ.
ಇಂದು ನಡೆದ ಪ್ರಕ್ರಿಯೆ ಅತ್ಯಂತ ಕ್ಲಿಷ್ಟಕರವಾಗಿರಲಿದೆ ಎಂದು ಕೆಲ ದಿನಗಳ ಹಿಂದೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಇಸ್ರೋ ಮುಖ್ಯಸ್ಥ ಕೆ.ಸಿವನ್ ಹೇಳಿದ್ದರು. ಸದ್ಯ ಈ ಕಠಿಣ ಸವಾಲಿನಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ಸು ಸಾಧಿಸಿದ್ದಾರೆ.
-
#ISRO
— ISRO (@isro) September 2, 2019 " class="align-text-top noRightClick twitterSection" data="
Vikram Lander Successfully separates from #Chandrayaan2 Orbiter today (September 02, 2019) at 1315 hrs IST.
For details please visit https://t.co/mSgp79R8YP pic.twitter.com/jP7kIwuZxH
">#ISRO
— ISRO (@isro) September 2, 2019
Vikram Lander Successfully separates from #Chandrayaan2 Orbiter today (September 02, 2019) at 1315 hrs IST.
For details please visit https://t.co/mSgp79R8YP pic.twitter.com/jP7kIwuZxH#ISRO
— ISRO (@isro) September 2, 2019
Vikram Lander Successfully separates from #Chandrayaan2 Orbiter today (September 02, 2019) at 1315 hrs IST.
For details please visit https://t.co/mSgp79R8YP pic.twitter.com/jP7kIwuZxH
ಸೆಪ್ಟೆಂಬರ್ 7ರ ಮುಂಜಾನೆ 1.40ರಿಂದ 155ರ ಅವಧಿಯಲ್ಲಿ ಚಂದ್ರನಲ್ಲಿ ಇಳಿಯುವ ಪ್ರಕ್ರಿಯೆ ನಡೆಯಲಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದ್ದು, ಇದೇ ಕಾರಣಕ್ಕೆ ಚಂದ್ರಯಾನ-2 ಮಹತ್ವದ ಪಡೆದಿದೆ.
ಚಂದ್ರನಲ್ಲಿ ಯಶಸ್ವಿಯಾಗಿ ಭಾರತ ಇಳಿದರೆ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ(ಅಮೆರಿಕ, ಚೀನಾ, ರಷ್ಯಾ) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ರಾಷ್ಟ್ರ ಭಾರತವಾಗಲಿದೆ.