ಕೋಲ್ಕತ್ತ(ಪಶ್ಚಿಮ ಬಂಗಾಳ): ನೇಮಕಾತಿಗೆ ಒತ್ತಾಯಿಸಿ ಕೋಲ್ಕತ್ತದ ವಿಕಾಸ ಭವನ ಮುತ್ತಿಗೆಗೆ ಮುಂದಾಗಿದ್ದ 30 ಪಿಟಿಟಿಐ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕೇಂದ್ರ ಅವೆನ್ಯೂ ಪ್ರದೇಶದಲ್ಲಿ ಪಾದಯಾತ್ರೆಗೆ ಮುಂದಾದಗ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಹೋರಾಟ ಮತ್ತಷ್ಟು ತೀವ್ರವಾಗುತ್ತಿದ್ದಂತೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.