ಭರುಚ್(ಗುಜರಾತ್): ಕೆಮಿಕಲ್ ಕಂಪನಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಸುಮಾರು 35-40 ಕಾರ್ಮಿಕರು ಗಾಯಗೊಂಡಿರುವ ಘಟನೆ ದಹೇಜ್ನಲ್ಲಿ ಸಂಭವಿಸಿದೆ.
ದಹೇಜ್ನ ಅಗ್ರೋ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಪರಿಣಾಮ ಸುಮಾರು 35-40 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭರುಚ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಅಕ್ಕ-ಪಕ್ಕ ಕಂಪನಿಗಳ ಮತ್ತು ಮನೆಗಳ ಗ್ಲಾಸ್ಗಳು ಪುಡಿ-ಪುಡಿಯಾಗಿವೆ. ಸುದ್ದಿ ತಿಳಿದ ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದೆ.